ಕಂಕುಳಲ್ಲಿ ಕಂದನನ್ನು ಹೊತ್ತು ಕರ್ತವ್ಯ ನಿಭಾಯಿಸಿದ ಮಹಿಳಾ ಪೊಲೀಸ್
ಪ್ರಿಯಾಂಕಾ ಅವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಶ್ರದ್ಧೆಗೆ ಎಲ್ಲರಿಂದಲೂ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.
Team Udayavani, Mar 7, 2021, 3:07 PM IST
ಚಂಡೀಗಡ : ಮಹಿಳಾ ಪೊಲೀಸ್ ಪೇದೆಯೋರ್ವಳು ತನ್ನ ಎಳೆಗೂಸನ್ನು ಹೊತ್ತು ಕರ್ತವ್ಯ ನಿಭಾಯಿಸಿದ ಘಟನೆ ಚಂಡೀಗಡದಲ್ಲಿ ನಡೆದಿದ್ದು, ಅವರ ಕರ್ತವ್ಯ ನಿಷ್ಠೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಪ್ರಿಯಾಂಕಾ ಹೆಸರಿನ ಪೇದೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಜನಮೆಚ್ಚುಗೆ ಪಡೆಯುತ್ತಿದ್ದಾರೆ. ಟ್ರಾಫಿಕ್ ಪೊಲೀಸ್ ಆಗಿರುವ ಪ್ರಿಯಾಂಕಾ ಶುಕ್ರವಾರ ತನ್ನ ಪುಟ್ಟ ಕಂದನನ್ನು ಹೊತ್ತು, ಸುಡುವ ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ವಾಹನ ಸವಾರನೋರ್ವ ಈ ವಿಡಿಯೋ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ.
ಪ್ರಿಯಾಂಕಾ ಅವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಶ್ರದ್ಧೆಗೆ ಎಲ್ಲರಿಂದಲೂ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ. ಸಾಕಷ್ಟು ಜನರು ಟ್ವಿಟರ್ ಹಾಗೂ ಫೇಸ್‍ಬುಕ್‍ಗಳಲ್ಲಿ ಈ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಇದರೊಂದಿಗೆ ಪ್ರಿಯಾಂಕಾ ಅವರ ಮೇಲೆ ಕನಿಕರ ತೋರದ ಹಿರಿಯ ಅಧಿಕಾರಿಗಳ ವಿರುದ್ಧವೂ ನೆಟ್ಟಿಜನ್ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪ್ರಿಯಾಂಕಾ ಅವರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು. ಆದರೆ, ಅವರು ಮಗು ಜತೆ 11 ಗಂಟೆಗೆ ಡ್ಯೂಟಿ ರಿಪೋರ್ಟ್ ಮಾಡಿಕೊಂಡಿದ್ದರು. ಮಗುವನ್ನು ಕರೆದುಕೊಂಡು ಬಂದಿದ್ದ ವಿಚಾರವಾಗಿ ಮೇಲಾಧಿಕಾರಿಗಳ ಜತೆಗೆ ವಾಗ್ವಾದ ನಡೆಸಿ, ಕರ್ತವ್ಯಕ್ಕೆ ಹಾಜರಾದರು ಎಂದು ಪೊಲೀಸ್ ಅಧಿಕಾರಿಯೋರ್ವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.