ಚಂಡೀಗಢ ವಿವಿ ವೈರಲ್ ವಿಡಿಯೋ: ಬ್ಲ್ಯಾಕ್ ಮೇಲ್ಗೆ ಹೆದರಿ ವಿಡಿಯೋ ಶೇರ್?
Team Udayavani, Sep 20, 2022, 7:00 PM IST
ಚಂಡೀಗಢ: ಪಂಜಾಬ್ನ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯು ಪ್ರಿಯತಮನೊಂದಿಗೆ ತನ್ನ ಖಾಸಗಿ ವಿಡಿಯೋಗಳನ್ನು ಹಂಚಿಕೊಂಡ ಪ್ರಕರಣ ತನಿಖೆ ಹಂತದಲ್ಲಿದ್ದು, ಮತ್ತಷ್ಟು ಕುತೂಹಲಕಾರಿ ವಿಚಾರಗಳು ಹೊರಬಿದ್ದಿವೆ.
ಯುವತಿ, ಆಕೆಯ ಪ್ರಿಯತಮ, ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದಲ್ಲದೇ ಮತ್ತೋರ್ವ ವ್ಯಕ್ತಿಯಿಂದ ಯುವತಿಗೆ ಕರೆ ಬಂದಿದ್ದು, ಆ ವ್ಯಕ್ತಿ, “ಬೇರೆ ಯುವತಿಯರ ವಿಡಿಯೋ ಕಳಿಸದಿದ್ದರೆ ನಿನ್ನ ಖಾಸಗಿ ವಿಡಿಯೋವನ್ನು ವೈರಲ್ ಮಾಡುತ್ತೇನೆ’ ಎಂದು ಯುವತಿಗೆ ಬೆದರಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಆತನನ್ನೂ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಯುವತಿ ಪ್ರಿಯತಮನೊಂದಿಗೆ 2021ರಲ್ಲಿ ಕೊನೆಯದಾಗಿ ತನ್ನ ವಿಡಿಯೋಗಳನ್ನು ಹಂಚಿಕೊಂಡಿದ್ದಳು. ಇತ್ತೀಚೆಗೆ ಬೇರೊಬ್ಬ ವ್ಯಕ್ತಿ ಆಕೆಗೆ ಬ್ಲ್ಯಾಕ್ ಮೇಲ್ಗೆ ಮಾಡಿದ್ದರಿಂದ ಆಕೆ ಕೆಲ ಹುಡುಗಿಯರು ಫೋಟೋಗಳನ್ನು ಆತನೊಂದಿಗೆ ಹಂಚಿಕೊಂಡಿದ್ದಳು. ವಿಡಿಯೋಗಳನ್ನೂ ಮಾಡಿದ್ದಳಾದರೂ ಅದು ಸರಿಯಾಗಿ ಚಿತ್ರೀಕರಣ ಆಗಿರಲಿಲ್ಲವೆಂದು ಮೂಲಗಳು ಹೇಳಿವೆ. ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.