Andhra Pradesh ಬಂದ್ ವಿಫಲ; 21 ಶಾಸಕರಿಗೆ ಪೊಲೀಸರಿಂದ ಗೃಹ ಬಂಧನ
Team Udayavani, Sep 11, 2023, 9:07 PM IST
ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮದ 370 ಕೋಟಿ ರೂ. ಹಗರಣದಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ಟಿಡಿಪಿ ಕರೆ ನೀಡಿದ್ದ ಆಂಧ್ರಪ್ರದೇಶ ಬಂದ್‌ಗೆ ನಿರೀಕ್ಷಿತ ಸ್ಪಂದನೆ ವ್ಯಕ್ತವಾಗಿಲ್ಲ.
ಆಂಧ್ರಪ್ರದೇಶದ ವಿವಿಧ ಭಾಗಗಳಲ್ಲಿ ನಾಯ್ಡು ಬಂಧನ ಖಂಡಿಸಿ ಟಿಡಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆದರೆ, ಬಂದ್‌ಗೆ ಸಾರ್ವಜನಿಕರು ಸ್ಪಂದಿಸಲಿಲ್ಲ. ಈ ಬಗ್ಗೆ ಮಾತನಾಡಿದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಶಂಖ ಬಾತ್ರಾ ರಾಜ್ಯಾದ್ಯಂತ ಪರಿಸ್ಥಿತಿ ಶಾಂತಿಯುತವಾಗಿತ್ತು ಎಂದಿದ್ದಾರೆ.
ಈ ನಡುವೆ ಟಿಡಿಪಿ ಶಾಸಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ವಿಧಾನಸಭೆಯಲ್ಲಿರುವ ಎಲ್ಲ 21 ಶಾಸಕರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸಲು ಸೂಕ್ತ ನಾಯಕತ್ವದ ಕೊರತೆಯಾಗಿದ್ದೂ ಬಂದ್ ವಿಫಲಗೊಳ್ಳಲು ಕಾರಣವಾಯಿತು.
ಜೈಲಿಗೆ ಶಿಫ್ಟ್:
14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಾಯ್ದು ಅವರನ್ನು ರಾಜಾ ಮಹೇಂದ್ರವರಮ್ ನಗರದಲ್ಲಿರುವ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಕೋರ್ಟ್ ಆದೇಶದ ಅನ್ವಯ ಜೈಲಲ್ಲಿ ಮನೆಯ ಊಟ, ಧ್ಯಾನ ನಡೆಸಲು ಅವಕಾಶ, ಪ್ರತ್ಯೇಕ ಸೆಲ್ ನೀಡಲು ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.