ಛತ್ತೀಸ್‌ಗಢ: ಸೋಲಿನಿಂದ ಕಲಿತ ಪಾಠ
Team Udayavani, May 24, 2019, 12:03 PM IST
ಛತ್ತೀಸ್‌ಗಢದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಅನಭವಿಸಿದ ಸೋಲಿನಿಂದ ಪಾಠ ಕಲಿತಂತಿದೆ. ಕೆಲವೇ ತಿಂಗಳುಗಳ ಹಿಂದೆ ನಡೆದಿದ್ದ ವಿಧಾನಸಬೆ ಚುನಾವಣೆಯಲ್ಲಿ ಸೋಲುತ್ತಿದ್ದಂತೆಯೇ ಎಲ್ಲ 11 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದೆ. ಅಷ್ಟೇ ಅಲ್ಲ, ಆಡಳಿತ ವಿರೋಧಿ ಅಲೆಯನ್ನೂ ಸದೆಬಡಿದು ಇಡೀ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸಲಾಗಿತ್ತು. ಇತರ ಪರಿಣಾಮವೇ 11 ರಲ್ಲಿ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. 2014 ರಲ್ಲೂ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಈ ಬಾರಿಯೂ ಒಂದು ಕ್ಷೇತ್ರಕ್ಕೆ ತೃಪ್ತಿಪಟ್ಟುಕೊಂಡಿದೆ.
ನಿರೀಕ್ಷೆಯಂತೆಯೇ ಇಲ್ಲಿನ ಹಲವು ಕ್ಷೇತ್ರಗಳು ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಹಣಾಹಣಿಯನ್ನು ದಾಖಲಿಸಿವೆ. ಹಲವು ಕ್ಷೇತ್ರಗಳಲ್ಲಿ 2014ರಂತೆಯೇ ಕಡಿಮೆ ಅಂತರದಲ್ಲಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 2014 ರಲ್ಲಿ ಕೊರ್ಬಾದಲ್ಲಿ ಬಿಜೆಪಿಯ ಬನ್ಷಿಲಾಲ್ ಮಹತೋ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನ ಅಜಿತ್ ಜೋಗಿ ವಿರುದ್ಧ ಕೇವಲ 1217 ಮತಗಳಿಂದ ಮಹಾಸಮುಂದ್‌ನಲ್ಲಿ ಬಿಜೆಪಿಯ ಚಂದು ಲಾಲ್ ಗೆಲುವು ಸಾಧಿಸಿದ್ದರು.
ಗೆದ್ದ ಪ್ರಮುಖರು
ಅರುಣ್ ಸಾವೋ (ಬಿಜೆಪಿ), ಬಿಲಾಸ್‌ಪುರ
ದೀಪಕ್ ಬೈಜ್ (ಕಾಂಗ್ರೆಸ್), ಬಸ್ತಾರ್
ಸೋತ ಪ್ರಮುಖರು
ತಾಮ್ರಧ್ವಜ ಸಾಹು (ಕಾಂಗ್ರೆಸ್), ದುರ್ಗ
ವಿಷ್ಣು ದೇವ್ ಸಾಯಿ (ಬಿಜೆಪಿ), ರಾಯಗಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.