Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Team Udayavani, Oct 16, 2024, 4:07 PM IST
ಉತ್ತರಾಖಂಡ್: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಉತ್ತರಾಖಂಡದ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ವಿಜಯ್ ಕುಮಾರ್ ಜೋಗ್ದಂಡೆ ಅವರಿದ್ದ ಹೆಲಿಕಾಪ್ಟರ್ ಇಂದು ರಾಜ್ಯದ ಪಿಥೋರಗಢ ಜಿಲ್ಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಘಟನೆಯಿಂದ ಯಾವುದೇ ಅವಘಡ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು ಹೆಲಿಕಾಪ್ಟರ್ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆಯ ಸುಮಾರಿಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿದ್ದ ಹೆಲಿಕಾಪ್ಟರ್ ಮಿಲಾಮ್ ಕಡೆಗೆ ಪ್ರಯಾಣಿಸುತ್ತಿತ್ತು ಈ ವೇಳೆ ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಉತ್ತರಾಖಂಡದ ಮುನ್ಸಿಯಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಮಂಗಳವಾರ(ಅ.15) ರಂದು ಮುಖ್ಯ ಚುನಾವಣಾ ಆಯುಕ್ತರು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಿದ್ದರು.
ಇದನ್ನೂ ಓದಿ: Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.