ಮಕ್ಕಳ ಸುರಕ್ಷತೆ ವಿಚಾರ: 15ಕ್ಕೆ ಸುಪ್ರೀಂಕೋರ್ಟಲ್ಲಿ ವಿಚಾರಣೆ
Team Udayavani, Sep 13, 2017, 7:10 AM IST
ನವದೆಹಲಿ: ದೇಶಾದ್ಯಂತ ಇರುವ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟು ಸೆ.15ರಂದು ನಡೆಸಲಿದೆ. ಗುರುಗಾಂವ್‌ನ ಶಾಲೆಯೊಂದರಲ್ಲಿ ಬಾಲಕನೊಬ್ಬನ ಹತ್ಯೆಯಿಂದ ಉಂಟಾಗಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಇಬ್ಬರು ಮಹಿಳಾ ನ್ಯಾಯವಾದಿಗಳು ಈ ಅರ್ಜಿ ಸಲ್ಲಿಸಿದ್ದರು. ಶಾಲೆಗಳಲ್ಲಿ ಈಗ ಇರುವ ನಿಯಮದ ಜತೆಗೆ ಇನ್ನೂ ಹಲವು ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಇಂದು ಸಭೆ: ಈ ನಡುವೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮಕ್ಕಳ ಸುರಕ್ಷತೆ ಬಗ್ಗೆ ಬುಧವಾರ ನವದೆಹಲಿಯಲ್ಲಿ ಸಭೆ ನಡೆಸಲಿವೆ. ಮಕ್ಕಳ ಹಕ್ಕುಗಳ ಸಮಿತಿ, ಸಿಬಿಎಸ್‌ಇ, ಎನ್‌ಸಿಇಆರ್‌ಟಿಯ ಪ್ರಮುಖರು ಅದರಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಂತರ ಜಾಮೀನು: ಪ್ರದ್ಯುಮ್ನ ಸಾವಿಗೆ ಸಂಬಂಧಿಸಿದಂತೆ ಆರೋಪಕ್ಕೆ ಗುರಿಯಾಗಿರುವ ರೇಯಾನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಅಧ್ಯಕ್ಷ ಮತ್ತು ಎಂಡಿ ಬುಧವಾರದ ವರೆಗೆ ಜಾಮೀನು ಪಡೆದಿದ್ದಾರೆ. ಈ ಬಗ್ಗೆ ಅವರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಈ ನಡುವೆ ಅಸುನೀಗಿದ ಬಾಲಕ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಆತನನ್ನು ಲೈಂಗಿಕವಾಗಿ ಹಿಂಸೆಗೆ ಗುರಿಪಡಿಸಲಾಗಿಲ್ಲ ಎಂದು ಉಲ್ಲೇಖೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.