‘ನೀವು ತುಂಬಾ ಚೆನ್ನಾಗಿ ಕೆಲಸ ಮಾಡುತ್ತೀರಿ’: ಯೋಧನಿಗೆ ಬಾಲಕನ ಸೆಲ್ಯೂಟ್
Team Udayavani, Aug 12, 2019, 1:54 PM IST
ಮಹಾರಾಷ್ಟ್ರ: ಗಡಿ ರಕ್ಷಣೆ ಇರಲಿ, ನೈಸರ್ಗಿಕ ವಿಕೋಪಗಳ ಸಂದರ್ಭವೇ ಇರಲಿ ನಮ್ಮ ಸೈನಿಕರ ನಿಸ್ವಾರ್ಥ ಸೇವೆ ಸಂಕಷ್ಟಕ್ಕೆ ಒಳಗಾಗಿರುವವರ ಪರವಾಗಿಯೇ ಇರುತ್ತದೆ. ಈ ಸಲ ವರುಣನ ಮುನಿಸಿಗೆ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಹಲವಾರು ಪ್ರದೇಶಗಳಲ್ಲಿ ಭೀಕರ ಪ್ರವಾಹ ಎದುರಾಗಿದೆ. ಈ ಪ್ರದೇಶಗಳಲ್ಲಿ ಭಾರತೀಯ ಸೇನೆಯ ಮೂರೂ ಪಡೆಗಳ ಯೋಧರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಗಳು ರಾತ್ರಿ ಹಗಲೆನ್ನದೆ ಪರಿಹಾರ ಕಾರ್ಯಗಳಲ್ಲಿ ನಿರತರಾಗಿದ್ದಾರೆ.
ಸಂಕಷ್ಟದಲ್ಲಿ ಸಿಲುಕಿರುವವರ ಪಾಲಿಗೆ ಇವರೇ ಆಪತ್ಬಾಂಧವರು. ಪುಣೆಯಲ್ಲಿ ಮಹಿಳೆಯೊಬ್ಬರು ತಮ್ಮನ್ನು ರಕ್ಷಿಸಿದ ಭದ್ರತಾ ಸಿಬ್ಬಂದಿಯ ಪಾದ ಮುಟ್ಟು ನಮಸ್ಕರಿಸಿದ ವಿಡಿಯೋ ಒಂದು ದೇಶದ ಗಮನವನ್ನು ಸೆಳೆಯುತ್ತಿದೆ. ಅದೇ ರೀತಿಯಲ್ಲಿ ಪುಣೆಯ ಸಾಂಗ್ಲಿಯಲ್ಲಿರುವ ಗಾಂವ್ ಭಾಗ್ ಪ್ರದೇಶದಲ್ಲಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದ ಸೇನೆಯ ಯೋಧರೊಬ್ಬರಿಗೆ ಬಾಲಕನೊಬ್ಬ ಹಸ್ತಲಾಘವ ನೀಡಿ ‘ಆಪ್ ಬಹುತ್ ಅಚ್ಛೇ ಕಾಮ್ ಕರ್ತೇ ಹೋ…’ (ನೀವು ಬಹಳ ಚೆನ್ನಾಗಿ ಕೆಲಸ ಮಾಡುತ್ತೀರಿ) ಎಂದು ಹೆಳಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ನೆಟ್ಟಿಗರ ಪ್ರಶಂಸೆಗೆ ಪಾತ್ರವಾಗುತ್ತಿದೆ.
ಒಟ್ಟಿನಲ್ಲಿ ತಮ್ಮ ಮನೆಮಂದಿಯ ಚಿಂತೆಯನ್ನು ತೊರೆದು ಕಷ್ಟದಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗೆ ಧಾವಿಸಿ ಹಗಲಿರುಳೆನ್ನದೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಯೋಧರಿಗೆ ಮತ್ತು ರಕ್ಷಣಾ ಸಿಬ್ಬಂದಿಗಳಿಗೆ ಇಂತಹ ಘಟನೆಗಳು ನೈತಿಕ ಸ್ಥೈರ್ಯವನ್ನು ತುಂಬುವುದಂತೂ ಸುಳ್ಳಲ್ಲ.
#WATCH A child salutes an Army personnel and tells him “aap bahut accha kaam karte ho”, during rescue operations in flood-hit Gaonbagh. #Maharashtra (Source- Defence PRO) pic.twitter.com/ym1RX7TKjA
— ANI (@ANI) August 11, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.