ಮೋದಿ ಪ್ರಮಾಣ ವಚನಕ್ಕೆ ತೆರಳುವುದಿಲ್ಲ; ಮಮತಾ ಮನಸ್ಸು ಬದಲು
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದುಕೊಂಡಿದ್ದೆ.ಆದರೆ...
Team Udayavani, May 29, 2019, 2:51 PM IST
ಕೋಲ್ಕತಾ : ಮೇ 30 ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಸಿದ್ದವಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನಸ್ಸು ಬದಲಾಯಿಸಿ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಬುಧವಾರ ಟ್ವೀಟ್ ಮಾಡಿರುವ ಮಮತಾ , ಅಭಿನಂದನೆಗಳು ಪ್ರಧಾನಿ ನರೇಂದ್ರ ಮೋದಿ ಅವರೇ, ನಾನು ಸಾಂವಿಧಾನಿಕ ಆಮಂತ್ರಣವನ್ನುಸ್ವೀಕರಿಸಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದುಕೊಂಡಿದ್ದೆ. ಆದರೆ, ಕಳೆದ1 ಗಂಟೆಗಳಿಂದ ಮಾಧ್ಯಮಗಳ ವರದಿ ನೋಡುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ 54 ರಾಜಕೀಯ ಹತ್ಯೆಗಳು ನಡೆದಿವೆ ಎಂದು ಬಿಜೆಪಿ ಆರೋಪಿಸುತ್ತಿದೆ. ಇದು ಸಂಪೂರ್ಣ ತಪ್ಪುವರದಿ. ಬಂಗಾಳದಲ್ಲಿ ಯಾವುದೇ ರಾಜಕೀಯ ಹತ್ಯೆಗಳು ನಡೆದಿಲ್ಲ. ವೈಯಕ್ತಿಕ ವೈರತ್ವ, ಕುಟುಂಬ ಕಲಹ ಮತ್ತು ಇತರ ವಿವಾದಗಳಿಂದ ಹತ್ಯೆಗಳು ನಡೆದಿವೆ. ಯಾವುದೂ ರಾಜಕೀಯ ಹತ್ಯೆಗಳಲ್ಲ.ನಮ್ಮ ಬಳಿ ಆ ರೀತಿಯ ದಾಖಲೆಗಳು ಇಲ್ಲ.
ಕ್ಷಮಿಸಿ ನರೇಂದ್ರ ಮೋದಿ ಜಿ, ಈ ವಿಚಾರಗಳು ನನ್ನನ್ನು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಡೆದಿವೆ ಎಂದು ಬರೆದಿದ್ದಾರೆ.
ಸಮಾರಂಭವು ಪ್ರಜಾಪ್ರಭುತ್ವ ಉತ್ಸವವನ್ನು ಆಚರಿಸಲು ಒಂದು ಸಂದರ್ಭವಾಗಿದೆ, ಯಾವುದೇ ರಾಜಕೀಯ ಪಕ್ಷ ರಾಜಕೀಯ ಲಾಭ ಗಳಿಸಲು ಅವಕಾಶವನ್ನು ಬಳಸಿಕೊಳ್ಳುವಂತಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.