ಪೌರತ್ವ, ಬಿಜೆಪಿ ಜತೆ ಹೊಂದಾಣಿಕೆ: ಜೆಡಿಯುನಲ್ಲಿ ಭಿನ್ನಮತ
ಪಕ್ಷಾಧ್ಯಕ್ಷ ನಿತೀಶ್‌ಗೆ ಬರೆದ ಪತ್ರದಲ್ಲಿ ಪವನ್ ವರ್ಮಾ ಆಕ್ಷೇಪ;ಮನಸ್ಸಿದ್ದರೆ ನಮ್ಮ ಜತೆ ಇರಲಿ; ಇಲ್ಲದಿದ್ದರೆ ಹೋಗಲಿ: ನಿತೀಶ್
Team Udayavani, Jan 23, 2020, 9:46 PM IST
ಪಾಟ್ನಾ: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿರುವ ವಿಚಾರ ಮತ್ತು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿರುವ ವಿಚಾರ ಜೆಡಿಯುನಲ್ಲಿ ಭಿನ್ನಮತ ಭುಗಿಲೇಳಲು ಕಾರಣವಾಗಿದೆ. ರಾಜ್ಯಸಭೆ ಮಾಜಿ ಸದಸ್ಯ, ಜೆಡಿಯು ಹಿರಿಯ ನಾಯಕ ಪವನ್ ವರ್ಮಾ 2 ದಿನಗಳ ಹಿಂದೆ ಬಿಹಾರ ಸಿಎಂ ನಿತೀಶ್‌ಗೆ ಪತ್ರ ಬರೆದು ಸಿಎಎ, ಎನ್‌ಪಿಆರ್, ಎನ್‌ಆರ್‌ಸಿಗೆ ಬೆಂಬಲ ನೀಡುವುದರ ಬಗ್ಗೆ ತಾತ್ವಿಕ ನಿಲುವು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದರು. ಜತೆಗೆ ಬಿಜೆಪಿ ಸಮಾಜ ವಿಭಜಿಸುವ ಚಿಂತನೆಯಲ್ಲಿದೆ ಎಂದಿದ್ದರು.
ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ನಿತೀಶ್ ಕುಮಾರ್ “ಅವರೊಬ್ಬ ವಿದ್ವಾಂಸ. ಅವರ ಬಗ್ಗೆ ನನಗೆ ವೈಯಕ್ತಿಕ ಗೌರವಗಳಿವೆ. ಆದರೆ ಇಂಥ ಹೇಳಿಕೆಗಳನ್ನು ನೀಡಿರುವುದು ನನಗೆ ದಿಗ್ಭ್ರಮೆ ಮೂಡಿಸಿದೆ’ ಎಂದಿದ್ದಾರೆ. ಅವರು ಪ್ರಸ್ತಾಪ ಮಾಡಿರುವ ಬಗ್ಗೆ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಲ್ಲವೂ ಸ್ಪಷ್ಟವಾಗಿದೆ ಎಂದಿದ್ದಾರೆ.
ಪಕ್ಷದಲ್ಲಿ ಇರಲು ಮನಸ್ಸಿಲ್ಲದಿದ್ದರೆ ಅವರು ಹೊರ ನಡೆಯಬಹುದು ಎಂದು ಸೂಚ್ಯವಾಗಿಯೇ ಹೇಳಿದ್ದಾರೆ. ಪೌರತ್ವ ಕಾಯ್ದೆ ಮತ್ತು ಇತರ ವಿಚಾರಗಳಲ್ಲಿ ನೀಡಿರುವ ಬೆಂಬಲ ಹಿಂಪಡೆಯುವುದಿಲ್ಲ ಎಂದಿದ್ದಾರೆ.
ವರ್ಮಾ ತಿರುಗೇಟು: ಬಿಹಾರ ಸಿಎಂ ಮಾತುಗಳಿಗೆ ತಿರುಗೇಟು ನೀಡಿರುವ ವರ್ಮಾ, ಪಕ್ಷದ ಮತ್ತು ದೇಶದ ಹಿತದೃಷ್ಟಿಯಿಂದ ಮಾತನಾಡುವುದನ್ನು ಮುಂದುವರಿಸುತ್ತೇನೆ ಎಂದಿದ್ದಾರೆ. ತಾವು ಪ್ರಸ್ತಾಪ ಮಾಡಿರುವ ಅಂಶಗಳ ಬಗ್ಗೆ ಉತ್ತರ ಸಿಕ್ಕಿಲ್ಲ. ಅದು ಸಿಕ್ಕಿದ ಬಳಿಕ ಮುಂದಿನ ದಾರಿಯ ಬಗ್ಗೆ ಯೋಚಿಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.