ಸಿಎಎ ಕಾಯ್ದೆ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ, ಬದಲಾಗಿ ಪೌರತ್ವ ನೀಡುತ್ತದೆ: ಮೋದಿ
Team Udayavani, Jan 12, 2020, 12:23 PM IST
ಕೊಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ ನಿಮ್ಮ ಪೌರತ್ವ ಕಿತ್ತುಕೊಳ್ಳುವುದಿಲ್ಲ. ಬದಲಾಗಿ ಪೌರತ್ವ ನೀಡುವುದು ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.
ಇಂದು ಕೊಲ್ಕತ್ತಾದ ರಾಮಕೃಷ್ಣ ಮಿಷನ್ ಮುಖ್ಯಕಚೇರಿ ಬೇಲೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾತ್ರಿ ಹಗಲಾಗುವುದರೊಳಗೆ ಜಾರಿಗೆ ತರಲಿಲ್ಲ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ, ಚರ್ಚೆ ನಡೆಸಿ ಸದಸ್ಯರ ಅಂಗೀಕಾರ ಸಿಕ್ಕಿದ ಮೇಲೆಯೇ ಜಾರಿಯಾಗಿದ್ದು. ಇದರ ಬಗ್ಗೆ ಯುವಕರಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸಲಾಗುತ್ತಿದೆ. ಯುವಜನತೆಗೆ ಇದನ್ನು ಅರ್ಥ ಮಾಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
ಸಿಎಎಯಿಂದಾಗಿ ಜನರಿಗೆ ಇಂದು ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘಾನಿಸ್ತಾನಗಳ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಕಿರುಕುಳದ ಬಗ್ಗೆ ಅರಿವಾಗುತ್ತಿದೆ. ಹೀಗಿರುವಾಗ ವಿರೋಧ ಪಕ್ಷಗಳ ನಾಯಕರು ರಾಜಕೀಯ ಲಾಭಕ್ಕಾಗಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ನಂತರ ಮಹಾತ್ಮಾ ಗಾಂಧಿ ಮತ್ತು ಇತರ ನಾಯಕರು ಪಾಕಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗುವ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಬೇಕೆಂದೇ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.
ಕಾಯ್ದೆಯನ್ನು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಆದರೆ, ಇದರಲ್ಲಿ ರಾಜಕೀಯ ಆಟವನ್ನು ಆಡುತ್ತಿರುವವರು ಅರ್ಥ ಮಾಡಿಕೊಳ್ಳುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುತ್ತಿದ್ದಾರೆ. ಕಾಯ್ದೆ ಬಗ್ಗೆ ಎಲ್ಲೆಡೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಯಾವಾಗಲೂ ಸ್ವಾಮಿ ವಿವೇಕಾನಂದ ಅವರನ್ನು ಸ್ಮರಿಸಬೇಕು. ನನಗೆ ನೂರು ಉತ್ಸಾಹಿ ಯವಕರನ್ನು ಕೊಡಿ ನಾನು ಖಂಡಿತವಾಗಿ ಭಾರತದ ಸುಧಾರಣೆ ಮಾಡುತ್ತೇನೆಂಬ ಅವರ ಅಪ್ರತಿಮ ಹೇಳಿಕೆಯನ್ನು ಸದಾ ಗಮನದಲ್ಲಿಟ್ಟುಕೊಳ್ಳಬೇಕು. ಕೆಲವೊಂದು ಒಳ್ಳೆಯ ಕೆಲಸವನ್ನು ಮಾಡುವಾಗ ನಮ್ಮ ಶಕ್ತಿ ಮತ್ತು ಒಳ್ಳೆಯ ಮನೋಭಾವ ಕೆಲಸದಲ್ಲಿ ಬದಲಾವಣೆ ಕಾಣಲು ತುಂಬಾ ಅವಶ್ಯಕ ಎಂದು ಪ್ರಧಾನಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.