J&K; ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ದಾಳಿ: ಯೋಧರು ಸೇರಿ ನಾಲ್ವರ ಸಾ*ವು
ಸೇನಾ ವಾಹನದ ಮೇಲೆ ಹೊಂಚುದಾಳಿ...
Team Udayavani, Oct 24, 2024, 9:42 PM IST
ಶ್ರೀನಗರ: ಜಮ್ಮು-ಕಾಶ್ಮೀರದ ಗುಲ್ಮಾರ್ಗ್ ಬಳಿ ಗುರುವಾರ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ಗುಂಡಿನ ದಾಳಿ ನಡೆಸಿ ದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಯೋಧರು, ಇಬ್ಬರು ಸೇನಾ ವಾಹನ ಚಾಲಕರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಯೋಧರು ಗಾಯ ಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾರಾಮುಲ್ಲದ ಬುಟಾ ಪಾಥ್ರಿ ಎಂಬಲ್ಲಿನ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಈ ಕೃತ್ಯವೆಸಗಿದ್ದಾರೆ. ಈ ವೇಳೆ ಸೇನಾ ವಾಹನವು ಬೆಂಕಿಗಾಹುತಿಯಾಗಿದೆ. ಘಟನೆಯನ್ನು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಡಿಸಿಎಂ ಸುರೇಂದರ್ ಚೌಧರಿ ಖಂಡಿಸಿದ್ದಾರೆ. ಕಳೆದ ರವಿವಾರ ಗಾಂದೆರ್‌ಬಾಲ್ ಜಿಲ್ಲೆಯಲ್ಲಿ ಲಷ್ಕರ್ ಉಗ್ರ ಸಂಘಟನೆ ನಡೆಸಿದ್ದ ದಾಳಿಯಲ್ಲಿ ಒಬ್ಬ ವೈದ್ಯ ಸೇರಿ 7 ಮಂದಿ ಅಸುನೀಗಿದ್ದರು. ಆ ಘಟನೆ ಬಳಿಕ 2ನೇ ದೊಡ್ಡ ದಾಳಿಯಾಗಿದೆ.
ಕಾರ್ಮಿಕನಿಗೆ ಗುಂಡು: ಇನ್ನೊಂದೆಡೆ, ಪುಲ್ವಾಮಾ ಜಿಲ್ಲೆಯ ತ್ರಾಲ್‌ನಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕರೊಬ್ಬರನ್ನು ಉಗ್ರರು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.