![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 17, 2022, 8:21 AM IST
ಪಾಲ್ನಾಡು: ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್ಆರ್ ಸಿಪಿ ಮತ್ತು ವಿರೋಧ ಪಕ್ಷವಾದ ಟಿಡಿಪಿ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಸಂಘರ್ಷ ನಡೆದ ಘಟನೆ ಶುಕ್ರವಾರ ರಾತ್ರಿ ಪಾಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಘರ್ಷಣೆಯ ನಂತರ ನೆರೆದಿದ್ದ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.
ಘರ್ಷಣೆಯಲ್ಲಿ ತನ್ನ ಪಕ್ಷದ ಕಚೇರಿ ಮತ್ತು ಅದರ ಮುಖಂಡರ ವಾಹನಗಳಿಗೆ ಉಂಟಾದ ಹಾನಿಯನ್ನು ಟಿಡಿಪಿ ತೀವ್ರವಾಗಿ ಖಂಡಿಸಿದೆ.
ಸ್ಥಳೀಯ ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಅವರ ಸಹೋದರನು ವೈಎಸ್‌ಆರ್‌ಸಿಪಿ ಕಾರ್ಯಕರ್ತರು ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ಪಕ್ಷದ ನಾಯಕರ ಕಾರುಗಳನ್ನು ಧ್ವಂಸಗೊಳಿಸಿದ್ದು, ಟಿಡಿಪಿ ಬೆಂಬಲಿಗರ ಒಡೆತನದ ಅಂಗಡಿಗಳಿಗೂ ಬೆಂಕಿ ಹಚ್ಚಲಾಗಿದೆ ಎಂದು ವೆಂಕಟರಾಮಿ ರೆಡ್ಡಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಇಂದು ಜೈಪುರ್ ಫ್ಯಾಂಥರ್-ಪುನೇರಿ ಪಲ್ಟಾನ್ ನಡುವೆ ಫೈನಲ್
ಅಲ್ಲದೆ ಗಲಭೆಯ ಸಂದರ್ಭದಲ್ಲಿ ಸ್ಥಳೀಯ ಪೊಲೀಸರು ಸುಮ್ಮನಿದ್ದರು, ಅಲ್ಲದೆ ವೈಎಸ್ಆರ್ ಸಿಪಿ ಕಾರ್ಯಕರ್ತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಹಿಂಜರಿದರು ಎಂದು ಅವರು ದೂರಿದ್ದಾರೆ.
“ಮಾಚರ್ಲ ಕ್ಷೇತ್ರದಲ್ಲಿ ವೈಸಿಪಿ ರೌಡಿಗಳು ಪೊಲೀಸರ ನೆರವಿನಿಂದ ಟಿಡಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಘೋರ ಘಟನೆ. ಖರ್ಮ ರಾಜ್ಯಕ್ಕಾಗಿ ಕಾರ್ಯಕ್ರಮ ಆಯೋಜಿಸುತ್ತಿದ್ದ ಟಿಡಿಪಿ ಮೇಲೆ ವೈಸಿಪಿ ರೌಡಿಗಳು ದಾಳಿ ನಡೆಸಿರುವುದು ರಾಜ್ಯದಲ್ಲಿ ನಡೆಯುತ್ತಿರುವ ಅರಾಜಕತೆಯ ಆಡಳಿತಕ್ಕೆ ಸಾಕ್ಷಿಯಾಗಿದೆ” ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ. ಲೋಕೇಶ್ ಹೇಳಿದರು.
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.