ಶ್ರೀನಗರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳು, ಸಿಬಂದಿಗಳ ಮಾರಾಮಾರಿ, ಪರಿಸ್ಥಿತಿ ನಿಯಂತ್ರಣದಲ್ಲಿ
Team Udayavani, Apr 5, 2019, 12:32 PM IST
ಶ್ರೀನಗರ : ಇಲ್ಲಿನ ಸೆಂಟ್ರಲ್ ಜೈಲಿನಲ್ಲಿ ಕೈದಿಗಳು ಮತ್ತು ಬಂಧೀಖಾನೆ ಸಿಬಂದಿಗಳ ನಡುವೆ ಮಾರಾಮಾರಿ ನಡೆದ ಘಟನೆ ವರದಿಯಾಗಿದೆ.
ನಿನ್ನೆ ಗುರುವಾರ ರಾತ್ರಿ ಕೆಲವೊಂದು ಬ್ಯಾರಾಕ್ ಗಳ ನವೀಕರಣಕ್ಕಾಗಿ ಅಲ್ಲಿ ಇರಿಸಲಾಗಿದ್ದ ಕೈದಿಗಳನ್ನು ಬೇರೆ ಬ್ಯಾರಕ್‌ಗಳಿಗೆ ಶಿಫ್ಟ್ ಮಾಡಲು ಮುಂದಾದ ಜೈಲು ಸಿಬಂದಿಗಳ ವಿರುದ್ಧ ಕೈದಿಗಳು ಆಕ್ರೋಶ ವ್ಯಕ್ತಪಡಿಸಿ ಕಾಳಗಕ್ಕೆ ಇಳಿದರು.
ಕಾಶ್ಮೀರ ಕಣಿವೆಯ ಹೊರಗೆ ಎಲ್ಲೋ ಒಂದೆಡೆ ತಮ್ಮನ್ನು ಜೈಲಿನಲ್ಲಿ ಕೂಡಿ ಹಾಕಲಾಗುವುದೆಂಬ ಭೀತಿ, ಆತಂಕವೇ ಕೈದಿಗಳ ಆಕ್ರೋಶಕ್ಕೆ ಕಾರಣವೆಂದು ಹೇಳಲಾಗಿದೆ.
ಜಗಳದ ಪರಾಕಾಷ್ಠೆಯಲ್ಲಿ ಕೆಲವು ಕೈದಿಗಳು ಬಂಧೀಖಾನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳಿಗೆ ಬೆಂಕಿ ಹಚ್ಚಿದರಲ್ಲದೆ ಜೈಲಿನ ಸೊತ್ತುಗಳನ್ನು ಧ್ವಂಸಗೊಳಿಸಲು ಮುಂದಾದರು.
ಆಕ್ರೋಶಿತ ಕೈದಿಗಳು ಕನಿಷ್ಠ ಎರಡು ಬ್ಯಾರಾಕ್‌ಗಳಿಗೆ ಮತ್ತು ಜೈಲಿನ ಮೆಸ್ ಗೆ ಬೆಂಕಿ ಹಚ್ಚಿದರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧೀಖಾನೆಯೊಳಗಿನ ಉದ್ರಿಕ್ತ ಪರಿಸ್ಥಿತಿಯನ್ನು ಕೂಡಲೇ ನಿಯಂತ್ರಣಕ್ಕೆ ತರಲಾಗಿದೆ ಮತ್ತು ಅಲ್ಲಿನ ಸ್ಥಿತಿಗತಿಯ ಮೇಲೆ ನಿಕಟ ಕಣ್ಗಾವಲು ಇರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
ಈ ನಡುವೆ ಶ್ರೀನಗರ ಸಿಟಿಯಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ; ಅಂತೆಯೇ ದಕ್ಷಿಣ ಕಾಶ್ಮೀರದಲ್ಲಿ ಇಂಟರ್‌ನೆಟ್ ವೇಗವನ್ನು ತಗ್ಗಿಸಲಾಗಿದೆ; ಹಳೇ ನಗರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
MUST WATCH
ಹೊಸ ಸೇರ್ಪಡೆ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Mangaluru: ಎಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.