ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ: ಕಾನ್ಪುರ ಉದ್ರಿಕ್ತ
Team Udayavani, Jun 3, 2022, 10:33 PM IST
ಕಾನ್ಪುರ: ಉತ್ತರ ಪ್ರದೇಶದ ಬಿಜೆಪಿಯ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಹೇಳಲಾಗಿದ್ದು ಈ ವಿಚಾರ ಕಾನ್ಪುರದಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಿದೆ.
ಟಿವಿಯಲ್ಲಿ ಮೂಡಿಬಂದ ಚರ್ಚೆಯೊಂದರಲ್ಲಿ, ನೂಪುರ್‌ರವರ ಹೇಳಿಕೆಯನ್ನು ಖಂಡಿಸಿದ ಸ್ಥಳೀಯ ಮುಸ್ಲಿಂ ಸಂಘಟನೆಯೊಂದು, ಕಾನ್ಪುರದ ಅತಿ ದೊಡ್ಡ ಸಗಟು ವ್ಯಾಪಾರ ಮಾರುಕಟ್ಟೆಯಾದ ಪರೇಡ್ ಮಾರ್ಕೆಟನ್ನು ಮುಚ್ಚುವಂತೆ ಕರೆ ನೀಡಿತ್ತು.
ಇದರ ನಡುವೆಯೇ, ಪರೇಡ್ ಚೌಕ್‌ನಲ್ಲಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಇದೇ ವೇಳೆ, ಕಲ್ಲುತೂರಾಟದಲ್ಲಿ ಭಾಗಿಯಾಗಿದ್ದ ಸುಮಾರು 12 ಜನರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಎರಡು ಕೇಸ್
ನೂಪುರ್ ಶರ್ಮಾ ಅವರ ಅವಹೇಳಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಥಾಣೆ ಹಾಗೂ ದಕ್ಷಿಣ ಮುಂಬೈನಲ್ಲಿ ಎರಡು ಪ್ರಕರಣ ದಾಖಲಾಗಿವೆ. ಧಾರ್ಮಿಕ ಭಾವನೆಗೆ ನೋವುಂಟು ಮಾಡಿರುವುದು ಹಾಗೂ ಶತ್ರುತ್ವ ಭಾವನೆ ಬೆಳೆಸಲು ಪ್ರೇರಣೆ ನೀಡಿರುವುದಾಗಿ ಅವರ ವಿರುದ್ಧ ದಾಖಲಿಸಲಾಗಿರುವ ದೂರುಗಳಲ್ಲಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.