Shocking… ವಿದ್ಯಾರ್ಥಿಗೆ ಥಳಿಸಿ ಮುಖಕ್ಕೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದ ಪುಂಡರು
Team Udayavani, Nov 27, 2023, 2:58 PM IST
ಮೀರತ್ : ಉತ್ತರ ಪ್ರದೇಶದ ಮೀರತ್‌ನಲ್ಲಿ 12 ನೇ ತರಗತಿ ವಿದ್ಯಾರ್ಥಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿದ ಅಮಾನುಷ ಘಟನೆ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಘಟನೆಗೆ ಸಂಬಂಧಿಸಿದ ದೃಶ್ಯಗಳು ಹರಿದಾಡುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಘಟನೆ ವಿವರ: ನವೆಂಬರ್ 13 ರಂದು ಘಟನೆ ನಡೆದಿದ್ದು ಯುವಕರ ಗುಂಪೊಂದು ವಿದ್ಯಾರ್ಥಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿದ್ದಾರೆ ಆ ಬಳಿಕ ವಿದ್ಯಾರ್ಥಿಯ ಮುಖದ ಮೇಲೆ ಓರ್ವ ಮೂತ್ರ ವಿಸರ್ಜನೆ ಮಾಡಿ ಅಮಾನುಷವಾಗಿ ವರ್ತಿಸಿದ್ದಾನೆ ಇಷ್ಟೆಲ್ಲಾ ಘಟನೆ ನಡೆದಿರುವುದನ್ನು ಗುಂಪಿನ ಓರ್ವ ಸದಸ್ಯ ಚಿತ್ರೀಕರಿಸಿದ್ದಾನೆ.
ಹಲ್ಲೆ ಮಾಡಬೇಡಿ ಎಂದು ಯುವಕ ಎಷ್ಟೇ ಬೇಡಿಕೊಂಡರೂ ಆರೋಪಿಗಳು ಕೇಳಲಿಲ್ಲ. ವಿದ್ಯಾರ್ಥಿಯ ತಲೆ ಮತ್ತು ಬೆನ್ನಿಗೆ ಮನಬಂದಂತೆ ಥಳಿಸಿದ್ದಾರೆ. ಮತ್ತೊಬ್ಬ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸಮೀಪದಲ್ಲಿದ್ದ ಕೆಲವು ಸ್ನೇಹಿತರು ಈ ಭಯಾನಕ ದೃಶ್ಯಗಳನ್ನು ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಷಯ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಗುಂಪಿನಲ್ಲಿದ್ದ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಲಾಗಿದೆ ಎಂದು ತಂದೆ ನೀಡಿರುವ ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಯೂಷ್ ಸಿಂಗ್ ತಿಳಿಸಿದ್ದಾರೆ.
ಸಂಬಂಧಿಕರ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ನಿರ್ಜನ ಸ್ಥಳದಲ್ಲಿ ಮಗನನ್ನು ಅಪಹರಿಸಿ ಹಲ್ಲೆ ನಡೆಸಲಾಗಿದೆ ಎಂದು ತಂದೆ ದುಃಖ ವ್ಯಕ್ತಪಡಿಸಿದರು. ಮಗ ವಾಪಸ್ ಬಾರದ ಕಾರಣ ರಾತ್ರಿಯಿಡೀ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ. ಮರುದಿನ ಬೆಳಗ್ಗೆ ಸಂತ್ರಸ್ತೆ ಮನೆಗೆ ಬಂದು ನಡೆದ ಘಟನೆಯನ್ನು ವಿವರಿಸಿದ್ದಾನೆ. ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಂದೆ ಆರೋಪಿಸಿದ್ದಾರೆ.
3 ದಿನಡಾ ಬಳಿಕ ವಿಡಿಯೋ ವೈರಲ್ ಆಗಿದೆ. ಹಲ್ಲೆ ನಡೆಸಿದವರಲ್ಲಿ ಕೆಲವರು ಸ್ನೇಹಿತರಾಗಿದ್ದು, ಅವರ ನಡುವೆ ಯಾವುದೇ ವಿವಾದ ಇರಲಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ನಡುವೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
Warning: Disturbing video, abuse
In a shocking incident in UP’s Meerut, a man could be seen urinating on the face of a youth held captive by goons at a secluded spot under Medical PS area. The victim could be heard pleading but to no avail. Incident took place on November 13. pic.twitter.com/MlTSEnVzBS
— Piyush Rai (@Benarasiyaa) November 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.