4ನೇ ತರಗತಿ ವಿದ್ಯಾರ್ಥಿನಿಗೆ ಶಾಲಾ ಬಸ್ಸಿನಲ್ಲಿ ಲೈಂಗಿಕ ಕಿರುಕುಳ
Team Udayavani, Aug 7, 2018, 11:27 AM IST
ಹೊಸದಿಲ್ಲಿ : ಇಲ್ಲಿನ ಪ್ರತಿಷ್ಠಿತ ಶಾಲೆಯೊಂದರ ನಾಲ್ಕನೇ ತರಗತಿಯ ವಿದ್ಯಾರ್ಥಿನಿಗೆ ಆಕೆಯ ಶಾಲೆಯ ಹಿರಿಯ ವಿದ್ಯಾರ್ಥಿಗಳು ಶಾಲಾ ಬಸ್ಸಿನಲ್ಲಿ ನಿರಂತರ ಮೂರು ದಿನಗಳ ಕಾಲ ಲೈಂಗಿಕ ಕಿರುಕುಳ ನೀಡಿರುವುದು ವರದಿಯಾಗಿದೆ. ವಿದ್ಯಾರ್ಥಿನಿಯ ಹೆತ್ತವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ಬಾಲಕಿಯು ತನಗೆ ಹಿರಿಯ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ಕೊಡುತ್ತಿರುವ ಬಗ್ಗೆ ಶಾಲಾ ಬಸ್ಸಿನ ಜವಾಬ್ದಾರಿ ಇರುವ ಶಿಕ್ಷಕಿಯಲ್ಲಿ ಮೊದಲಾಗಿ ದೂರಿದ್ದಳು. ಆದರೆ ಆ ಶಿಕ್ಷಕಿಯು ಬಾಲಕಿಯ ದೂರಿಗೆ ಸ್ಪಂದಿಸಿರಲಿಲ್ಲ. ಇತ್ತ ಬಾಲಕಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಮುಂದುವರಿದೇ ಇತ್ತು.
ಹಾಗಾಗಿ ಬಾಲಕಿಯು ತನ್ನ ಹೆತ್ತವರಿಗೆ, ತನಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿರುವುದನ್ನು ತಿಳಿಸಿದಳು. ಅವರು ಶಾಲಾ ಆಡಳಿತಕ್ಕೆ ಈ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗಲಿಲ್ಲ. ಆಡಳಿತ ವರ್ಗದವರು ಪ್ರಕರಣದ ಗಂಭೀರತೆಯನ್ನು ಅರಿಯುವ ಆಸಕ್ತಿಯನ್ನೇ ತೋರದೆ ಸುಮ್ಮನಿದ್ದರು.
ಬಾಲಕಿಯ ಹೆತ್ತವರು ಕೊನೆಗೆ ದಿಲ್ಲಿ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದರು. ಪೊಲೀಸರೀಗ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.