ಜಿ20 ಕಾರಣ ದಿಲ್ಲಿಯಲ್ಲಿ ಒತ್ತುವರಿ ತೆರವು ತೀವ್ರ
Team Udayavani, May 24, 2023, 7:25 AM IST
ಹೊಸದಿಲ್ಲಿ: ಭಾರತದ ಅಧ್ಯಕ್ಷತೆಯಲ್ಲಿ ಈ ಬಾರಿ ಜಿ20 ರಾಷ್ಟ್ರಗಳ ಶೃಂಗಸಭೆ ನಡೆಯುತ್ತಿದೆ. ಇದಕ್ಕಾಗಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಕಲ ಸಿದ್ಧತೆಗಳು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಒತ್ತುವರಿದಾರರು ಮತ್ತು ಅಕ್ರಮವಾಗಿ ಮನೆಗಳನ್ನು ಕಟ್ಟಿದವರಿಗೆ ಕಟ್ಟಡ ತೆರವುಗೊಳಿಸುವಂತೆ ದಿಲ್ಲಿಯ ವಿವಿಧ ಇಲಾಖೆಗಳು ಸರಣಿ ನೋಟಿಸ್‌ಗಳನ್ನು ಜಾರಿಗೊಳಿಸುತ್ತಿವೆ.
ಅಕ್ರಮವಾಗಿ ನಿರ್ಮಿಸಿದ್ದಾರೆ ಎನ್ನಲಾದ ಮನೆಗಳನ್ನು ಮಾನವೀಯ ನೆಲೆಯಲ್ಲಿ ಧ್ವಂಸ ಮಾಡುವುದನ್ನು ಇಲಾಖೆಗಳು ಕೈಬಿಡಬೇಕು ಎಂದು ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ. “ಕಳೆದ ನವೆಂಬರ್‌ನಲ್ಲಿ ಭಾರತಕ್ಕೆ ಜಿ20 ಅಧ್ಯಕ್ಷೆತೆ ಪಟ್ಟ ದೊರೆಯಿತು. ಡಿಸೆಂಬರ್‌ನಿಂದ ಇದಕ್ಕಿದ್ದಂತೆ ಒತ್ತುವರಿ ತೆರವು ನೋಟಿಸ್‌ಗಳು ನಾಗರಿಕರಿಗೆ ಬರಲು ಆರಂಭವಾಯಿತು.
ದಿಲ್ಲಿಯ ಮೆಹೌಲಿಯಲ್ಲಿ 700 ಕಟ್ಟಡಗಳಿಗೆ ಒತ್ತುವರಿ ತೆರವು ನೋಟಿಸ್ ನೀಡಲಾಗಿದೆ. ಈ ಪೈಕಿ ಈಗಾಗಲೇ 25 ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಇನ್ನೊಂದೆಡೆ ತುಘಲಕಾಬಾದ್‌ನಲ್ಲಿ ಸುಮಾರು 3,000 ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಇದರಿಂದ ಜನರು ಆತಂಕಗೊಂಡಿದ್ದಾರೆ. ಎರಡೂ ಸ್ಥಳಗಳಲ್ಲಿ ಮನೆಗಳು ಮತ್ತು ಅಪಾರ್ಟ್‌ಮೆಂಟ್‌ಗಳನ್ನು ಕೆಡವಲಾಗಿದೆ’ ಎಂದು ಲ್ಯಾಂಡ್ ಕಾನ್ಫಿ$Éಕ್ಟ್ ವಾಚ್ ಸಂಸ್ಥೆಯ ಪೃಥ್ವಿರಾಜ್ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.