ಗಾಂಧಿ ಕುಟುಂಬದ ನಿಕಟವರ್ತಿ ಧವನ್ ನಿಧನ
Team Udayavani, Aug 7, 2018, 10:10 AM IST
ನವದೆಹಲಿ: ರಾಜೀವ್ ಗಾಂಧಿ ಕುಟುಂಬದ ನಿಕಟವರ್ತಿ, ಮಾಜಿ ಸಂಸದ ರಾಜೇಂದ್ರ ಕುಮಾರ್ ಧವನ್ (ಆರ್.ಕೆ.ಧವನ್) (81) ನಿಧನರಾಗಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಸಹಾಯಕರಾಗಿ ಧವನ್ ವೃತ್ತಿ ಆರಂಭಿಸಿದ್ದರು. 1975-1977ರ ಅವಧಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದಾಗ ಇಂದಿರಾ ಅವರ ಆತ್ಮೀಯ ವಲಯದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡರು.
1962ರಿಂದ 1982ರ ವರೆಗೆ ಇಂದಿರಾರ ಆಪ್ತ ವಲಯ ದಲ್ಲಿದ್ದರು. ಮಾಜಿ ಸಚಿವರಾದ ಅಂಬಿಕಾ ಸೋನಿ, ಕಮಲ್‌ನಾಥ್‌ರಂತೆ ಅವರು ಸಲಹೆ ಸೂಚನೆಗಳನ್ನು ನೀಡುತ್ತಿದ್ದರು. ಇಂದಿರಾ ಹತ್ಯೆ ಪ್ರಕರಣದ ಸಂದರ್ಭದಲ್ಲಿ ಅವರು ಸಾಕ್ಷಿ ಯಾಗಿದ್ದರು ಎಂದು ಹೇಳಲಾಗಿತ್ತು. ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಸೇರಿದಂತೆ ಅನೇಕ ಗಣ್ಯರು ಧವನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.