ಕೇಂದ್ರ ಜಲಶಕ್ತಿ ಸಚಿವ ಶೇಖಾವತ್ ರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳ ಕುರಿತು ಚರ್ಚೆ
Team Udayavani, Nov 30, 2022, 7:23 PM IST
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಭಗವಂತ ಖೂಬ ,ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ,ಮುಖ್ಯಮಂತ್ರಿಗಳ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.