ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು: ಸಿಎಂ ಬೊಮ್ಮಾಯಿ
Team Udayavani, Feb 7, 2022, 3:24 PM IST
ಹೊಸದಿಲ್ಲಿ: ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹೊಸದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರ ಆಗಬೇಕೆನ್ನುವುದು ನಮ್ಮ ನಿಲುವು. ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೂಡ ಹೇಳಲಾಗಿದೆ. ಕರ್ನಾಟಕ್ಕೆ ನ್ಯಾಯಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜೀವನದಿಗಳಾಗಿರುವ ಕೃಷ್ಣ ಮತ್ತು ಕಾವೇರಿ ಜಲಾನಯನ ಪ್ರದೇಶಗಳ ಪ್ರಶ್ನೆಯಾಗಿರುವುದರಿಂದ ಈ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.
ದೆಹಲಿಯಲ್ಲಿ ಇಂದು ಸಂಸದರ ಸಭೆ ನಡೆಯಲಿದೆ. ರಾಜ್ಯ ಮತ್ತು ಕೇಂದ್ರಕ್ಕೆ ಸಂಬಂಧಿಸಿರುವ ಹಲವಾರು ಯೋಜನೆಗಳು ಚರ್ಚೆಯಾಗಲಿವೆ. ಕೇಂದ್ರ ಬಜೆಟ್ ಆಧರಿಸಿ ರಾಜ್ಯ ಬಜೆಟ್‍ನ್ನು ಪೂರಕವಾಗಿ ನಾವೆಷ್ಟು ಅಂದಾಜುಗಳನ್ನು ಮಾಡಬೇಕು ಎನ್ನುವ ಬಗ್ಗೆ ಚರ್ಚಿಸಲಾಗುವುದು ಎಂದರು.
ಇದನ್ನೂ ಓದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,325 ಅಂಕ ಇಳಿಕೆ; ಭಾರೀ ನಷ್ಟ ಕಂಡ ಷೇರುಗಳು ಯಾವುದು?
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂಧನ ಸಚಿವರು, ರಕ್ಷಣ ಸಚಿವ ರಾಜ್‍ನಾಥ್ ಸಿಂಗ್ ಅವರನ್ನು ಭೇಟಿಯಾಗಲಿರುವುದಾಗಿ ಸಿಎಂ ತಿಳಿಸಿದರು. ನಾಳೆಯೂ ದೆಹಲಿಯಲ್ಲಿಯೇ ಇರುವುದಾಗಿ ತಿಳಿಸಿದ ಅವರು ಜೆ.ಪಿ.ನಡ್ಡಾ ಹಾಗೂ ಅಮಿತ್ ಶಾ ಅವರನ್ನೂ ಭೇಟಿಯಾಗುವ ಸಾಧ್ಯತೆಗಳಿವೆ. ಕೇಂದ್ರದ ನಾಯಕರು ಸಮಯ ನೀಡಿದಾಗ ಸಂಪುಟ ರಚನೆಗೆ ಸಂಬಂಧಿಸಿದ ವಿಷಯಗಳು ಚರ್ಚೆಗೆ ಬರಲಿವೆ ಎಂದರು.
ವಸ್ತ್ರ ಸಂಹಿತೆ ಸುತ್ತೋಲೆ ಪಾಲಿಸಿ: ಶಾಲಾ ಕಾಲೇಜುಗಳಲ್ಲಿ ಯಾವ ರೀತಿಯ ವಸ್ತ್ರಸಂಹಿತೆ ಇರಬೇಕೆನ್ನುವುದು ಸಂವಿಧಾನ ಹೇಳಿದೆ. ಕರ್ನಾಟಕ ಶಿಕ್ಷಣ ಕಾಯ್ದೆಯ ನಿಯಮಗಳಲ್ಲಿ ಹಾಗೂ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಸಹ ಸ್ಪಷ್ಟವಾಗಿ ಹೇಳಿದೆ. ಸರ್ಕಾರವೂ ಈಗಾಗಲೇ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮುಖ್ಯ. ಪರೀಕ್ಷೆಯೂ ಹತ್ತಿರ ಬರುತ್ತಿರುವುದರಿಂದ ಸರ್ಕಾರದ ಸುತ್ತೋಲೆಯನ್ನು ಎಲ್ಲರೂ ಪರಿಪಾಲಿಸಬೇಕು. ಉಚ್ಛನ್ಯಾಯಾಲಯದಲ್ಲಿಯೂ ಈ ಬಗ್ಗೆ ರಿಟ್ ಅರ್ಜಿ ಹಾಕಲಾಗದ್ದು, ಅಲ್ಲಿಯೂ ಚರ್ಚೆಯಾಗಿ ತೀರ್ಮಾನವಾಗಲಿದೆ. ಈ ಹಿನ್ನೆಲೆಯಲ್ಲಿ ಶಾಂತಿಯನ್ನೂ ಕಾಪಾಡಬೇಕು. ಯಾರೂ ಶಾಂತಿಯನ್ನು ಕದಡುವ ತೀರ್ಮಾನ ಮಾಡಬಾರದು. ಸುತ್ತೋಲೆಯನ್ನು ಪರಿಪಾಲಿಸಬೇಕು. ಇಂಥ ಪ್ರಕರಣಗಳು ಎಲ್ಲಾ ರಾಜ್ಯಗಳಲ್ಲಿ ನ್ಯಾಯಾಲಯದ ಮೆಟ್ಟಿಲು ಹತ್ತಿ ತೀರ್ಮಾನಗಳಾಗಿವೆ ಎಂದರು.
ಮಹಾನದಿ, ಗೋದಾವರಿ, ಕೃಷ್ಣ, ಕಾವೇರಿ, ಪಾಲಾರ್, ಪೆನ್ನಾರ್, ನದಿ ಜೋಡಣೆ ಹಿಮಾಲಯ ಹಾಗೂ ಪೆನೆಸ್ಯುಲಾರ್ ಭಾಗದ ಪ್ರಮುಖ ನದಿಜೋಡಣೆ ಯೋಜನೆಗಳು. ನಮ್ಮ ನಿಲುವಿನ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.