![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 16, 2022, 1:48 PM IST
ಹೊಸದಿಲ್ಲಿ: ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದಿಲ್ಲಿಯಲ್ಲಿ ಅಕ್ರಮವೆಂದು ಪರಿಗಣಿಸಲಾಗಿರುವ 63 ಲಕ್ಷ ಜನರ ಅಂಗಡಿಗಳು ಮತ್ತು ಮನೆಗಳನ್ನು ಬುಲ್ಡೋಜರ್‌ಗಳು ಧ್ವಂಸಗೊಳಿಸಿದರೆ ಅದು ” ಸ್ವತಂತ್ರ ಭಾರತದಲ್ಲಿ ಅತಿದೊಡ್ಡ ವಿನಾಶ ” ಎಂದು ಸೋಮವಾರ ಹೇಳಿದ್ದಾರೆ.
ಅತಿಕ್ರಮಣ ವಿರೋಧಿ ಅಭಿಯಾನ ಕುರಿತು ಆಮ್ ಆದ್ಮಿ ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ಕೇಜ್ರಿವಾಲ್ ಅವರು ದೆಹಲಿಯ ವಿವಿಧ ಭಾಗಗಳಲ್ಲಿ ಬಿಜೆಪಿ ನೇತೃತ್ವದ ಮುನ್ಸಿಪಲ್ ಕಾರ್ಪೊರೇಷನ್‌ಗಳು ನಡೆಸುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ವಿರೋಧಿಸಿ ಜೈಲಿಗೆ ಹೋಗಲು ಸಿದ್ಧರಾಗಿರಬೇಕು ಎಂದು ಹೇಳಿದರು.
ಅವರು ಬುಲ್ಡೋಜರ್‌ಗಳೊಂದಿಗೆ ಕಾಲೋನಿಗಳನ್ನು ತಲುಪುತ್ತಿದ್ದಾರೆ ಮತ್ತು ಅಂಗಡಿ ಮತ್ತು ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ. ಕಟ್ಟಡ ಅಕ್ರಮವಾಗಿಲ್ಲ ಎಂದು ಸಾಬೀತುಪಡಿಸಲು ಜನರು ಕಾಗದಪತ್ರಗಳನ್ನು ತೋರಿಸಿದರೂ, ಅವರು ಅದನ್ನು ಪರಿಶೀಲಿಸುವುದಿಲ್ಲ, ”ಎಂದು ಕಿಡಿ ಕಾರಿದರು.
ದೆಹಲಿಯನ್ನು ಯೋಜಿತ ರೀತಿಯಲ್ಲಿ ಮಾಡಿಲ್ಲ. ದೆಹಲಿಯ ಶೇಕಡಾ 80 ಕ್ಕಿಂತ ಹೆಚ್ಚು ಅಕ್ರಮ ಮತ್ತು ಅತಿಕ್ರಮಣ ಎಂದು ಕರೆಯಬಹುದು. ಅಂದರೆ ನೀವು ದೆಹಲಿಯ 80 ಪ್ರತಿಶತವನ್ನು ನಾಶಪಡಿಸುತ್ತೀರಿ ಎಂದರ್ಥವೇ? ಎಂದು ಪ್ರಶ್ನಿಸಿದರು.
ಅತಿಕ್ರಮಣ ವಿರೋಧಿ ಆಂದೋಲನ ನಡೆಸುತ್ತಿರುವ ರೀತಿಗೆ ಪಕ್ಷವು ವಿರುದ್ಧವಾಗಿದೆ , ಸುಮಾರು 50 ಲಕ್ಷ ಜನರು ಅನಧಿಕೃತ ಕಾಲೋನಿಗಳಲ್ಲಿದ್ದಾರೆ, 10 ಲಕ್ಷ ಜನರು ‘ಜುಗ್ಗಿ’ಗಳಲ್ಲಿದ್ದಾರೆ ಮತ್ತು ಬಾಲ್ಕನಿಗಳನ್ನು ಮಾರ್ಪಡಿಸಿದ ಅಥವಾ ಏನನ್ನಾದರೂ ಮಾಡುವ ಲಕ್ಷಾಂತರ ಜನರಿದ್ದಾರೆ. ಎಲ್ಲರದ್ದೂ ಮೂಲ ನಕ್ಷೆಗಳಿಗೆ ಅನುಗುಣವಾಗಿಲ್ಲ ಎಂದು ಅವರು ಹೇಳಿದರು.
ಇದನ್ನೂ ಓದಿ : ಸೈದ್ದಾಂತಿಕ ಬದ್ಧತೆಯ ಬಗ್ಗೆ ರಾಹುಲ್ ಗಾಂಧಿ ಬಿಡಿಸಿ ಹೇಳಬೇಕು: ಕುಮಾರಸ್ವಾಮಿ
“63 ಲಕ್ಷ ಜನರ ಮನೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ನಿಂದ ನಾಶ ಮಾಡಲಾಗುತ್ತದೆ. ಇದು ಸ್ವತಂತ್ರ ಭಾರತದಲ್ಲಿ ಆಗುತ್ತಿರುವ ದೊಡ್ಡ ವಿನಾಶವಾಗಲಿದೆ ಎಂದು ಅವರು ಹೇಳಿದರು.
ಆಮ್ ಆದ್ಮಿ ಪಕ್ಷವು ಅತಿಕ್ರಮಣಕ್ಕೆ ವಿರುದ್ಧವಾಗಿದೆ ಮತ್ತು ದೆಹಲಿ ಸುಂದರವಾಗಿ ಕಾಣಬೇಕೆಂದು ಬಯಸುತ್ತದೆ ಎಂದ ಅವರು, 63 ಲಕ್ಷ ಜನರ ಮನೆ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದರು.
”ಕಳೆದ 15 ವರ್ಷಗಳಲ್ಲಿ ಬಿಜೆಪಿ ಎಂಸಿಡಿಯಲ್ಲಿ ಅಧಿಕಾರದಲ್ಲಿತ್ತು ಮತ್ತು ಹಣವನ್ನು ತೆಗೆದುಕೊಂಡಿತು. ಮೇ 18ಕ್ಕೆ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಇಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಂವಿಧಾನಿಕ ಅಧಿಕಾರ ನಿಮಗಿದೆಯೇ? ಚುನಾವಣೆ ನಡೆಯಲಿ ಆ ಪಕ್ಷವೇ ನಿರ್ಧಾರ ತೆಗೆದುಕೊಳ್ಳಲಿ. ಎಂಸಿಡಿಯಲ್ಲಿ ಎಎಪಿ ಅಧಿಕಾರಕ್ಕೆ ಬರಲಿದೆ ಎಂಬುದು ಎಲ್ಲರಿಗೂ ತಿಳಿದಿದೆ, ಎಎಪಿ ಅತಿಕ್ರಮಣ ಸಮಸ್ಯೆಯನ್ನು ಪರಿಹರಿಸುತ್ತದೆ ಮತ್ತು ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವ ಜನರು ಮಾಲೀಕತ್ವದ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಜನರಿಗೆ ಭರವಸೆ ನೀಡಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.