ಕಲ್ಲು ತೂರಾಟ:4,327 ಮಂದಿಯ ಪ್ರಕರಣ ಹಿಂತೆಗೆಸಿದ ಸಿಎಂ ಮುಫ್ತಿ
Team Udayavani, Nov 30, 2017, 9:49 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ರಾಜ್ಯದ ವಿವಿಧೆಡೆ ದಾಖಲಾಗಿದ್ದ ಬರೋಬ್ಬರಿ 4,327 ಮಂದಿಯ ವಿರುದ್ಧದ ಕಲ್ಲು ತೂರಾಟ ಪ್ರಕರಣಗಳನ್ನು ಬುಧವಾರ ಹಿಂತೆಗೆಸಿದ್ದಾರೆ.
ಡಿಜಿಪಿ ನೇತೃತ್ವದ ಉನ್ನತ ಶಕ್ತಿಯ ಸಮಿತಿ ಸಭೆಯ ಬಳಿಕ ಈ ವಿದ್ಯಮಾನ ನಡೆದಿದೆ ಎಂದು ಸಿಎಂ ಮುಫ್ತಿ ಕಚೇರಿ ಮೂಲಗಳು ತಿಳಿಸಿವೆ.
2008 ರಿಂದ 2014 ರ ವರೆಗೆ ಯುವಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದುಕೊಳ್ಳಲು ಪ್ರಕ್ರಿಯೆ ಪ್ರಾರಂಭಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕೇಂದ್ರ ಸರ್ಕಾರದ ವಿಶೇಷ ಪ್ರತಿನಿಧಿ ದಿನೇಶ್ವರ್ ಶರ್ಮಾ ಅವರ ಸಲಹೆಯನ್ನು ಪರಿಗಣಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮುಫ್ತಿ ಅಧಿಕಾರಕ್ಕೆ ಬಂದ ತಿಂಗಳೊಳಗಾಗಿ 634 ಯುವಕರ ವಿರುದ್ಧ ದಾಖಲಾಗಿದ್ದ 104 ಪ್ರಕರಣಗಳನ್ನು ಹಿಂತೆಗೆಸಿಕೊಂಡಿದ್ದರು ಎಂದು ತಿಳಿದು ಬಂದಿದೆ.
2015 ರ ನಂತರ ದಾಖಲಾದ ಕಲ್ಲು ತೂರಾಟ ಪ್ರಕರಣಗಳ ಬಗ್ಗೆ ವಿವರ ನೀಡಲು ಪೊಲೀಸ್ ಅಧಿಕಾರಿಗಳಿಗೆ ಮುಫ್ತಿ ಸೂಚನೆ ನೀಡಿದ್ದಾರೆ.
‘ಈ ಪ್ರಯತ್ನವು ಯುವಕರ ಜೀವನವನ್ನು ಪುನಃ ನಿರ್ಮಿಸಲು ಅವಕಾಶವನ್ನು ಒದಗಿಸುತ್ತದೆ’ ಎಂದು ಮುಫ್ತಿ ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಜುಲೈ ತಿಂಗಳಿನಿಂದ ಇಲ್ಲಿಯವರೆಗೆಬರೋಬ್ಬರಿ 11,500 ಕಲ್ಲುತೂರಾಟ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.