ಕಲ್ಲಿದ್ದಲು ಹಗರಣ:ಮಾಜಿ ಕಾರ್ಯದರ್ಶಿ ಗುಪ್ತಾ ಅಪರಾಧಿ:ವಿಶೇಷ ಕೋರ್ಟ್
Team Udayavani, May 19, 2017, 11:24 AM IST
ಹೊಸದಿಲ್ಲಿ : ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ದಿಲ್ಲಿಯ ವಿಶೇಷ ಕೋರ್ಟ್ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್ ಸಿ ಗುಪ್ತಾ ಅವರನ್ನು ಅಪರಾಧಿ ಎಂದು ಘೋಷಿಸಿದೆ.
ಇದೇ ವೇಳೆ ನ್ಯಾಯಾಲಯವು ಕಲ್ಲಿದ್ದಲು ಸಚಿವಾಲಯದ ಆಗಿನ ಜಂಟಿ ಕಾರ್ಯದರ್ಶಿ ಕೆ ಎಸ್ ಕ್ರೋಫಾ, ಆಗಿನ ನಿರ್ದೇಶಕ ಕೆ ಸಿ ಸಮಾರಿಯಾ ಮತ್ತು ಇತರ ಕೆಲವರನ್ನು ಅಪರಾಧಿಗಳೆಂದು ಪ್ರಕಟಿಸಿದೆ.
ಆದರೆ ಈ ಪ್ರಕರಣದ ಓರ್ವ ಆರೋಪಿಯಾಗಿದ್ದ ಚಾರ್ಟರ್ಡ್ ಅಕೌಂಟೆಂಟ್ ಅಮಿತ್ ಗೋಯಲ್ ಅವರನ್ನು ಖುಲಾಸೆಗೊಳಿಸಿದೆ.
ಗುಪ್ತಾ, ಕ್ರೋಫಾ ಮತ್ತು ಸಮಾರಿಯಾ ಅವರೊಂದಿಗೆ ನ್ಯಾಯಾಲಯವು ಕೆಎಸ್‌ಎಸ್‌ಪಿಎಲ್ ಕಂಪೆನಿ ಮತ್ತು ಅದರ ಆಡಳಿತ ನಿರ್ದೇಶಕ ಪವನ್ ಕುಮಾರ್ ಅಹ್ಲುವಾಲಿಯಾ ಅವರನ್ನು ಕೂಡ ಅಪರಾಧಿಗಳೆಂದು ಪ್ರಕಟಿಸಿದೆ.
ಹಗರಣ ನಡೆದಿದ್ದ ವೇಳೆ ಕ್ರೋಫಾ ಅವರು ಕಲ್ಲಿದ್ದಲು ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು; ಸಮಾರಿಯಾ ಅವರು ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ ನಿರ್ದೇಶಕರಾಗಿದ್ದರು.
ಕಳೆದ ವರ್ಷ ನ್ಯಾಯಾಲಯವು ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸುವ ಸಂದರ್ಭದಲ್ಲಿ “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಗುಪ್ತಾ ಅವರು ಕತ್ತಲಲ್ಲಿ ಇಟ್ಟಿದ್ದರು; ಮೇಲ್ನೋಟಕ್ಕೇ ಅವರು ಕಾನೂನು ಉಲ್ಲಂಘನೆ ಮಾಡಿದ್ದರು ಮತ್ತು ಪ್ರಧಾನಿಯವರು ಆತನ ಮೇಲೆ (ಗುಪ್ತಾ) ಇರಿಸಿದ್ದ ವಿಶ್ವಾಸಕ್ಕೆ ಆತ ದ್ರೋಹ ಬಗೆದಿದ್ದ’ ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.