ಕೇರಳ ಸಚಿವರಿಗೆ ನೀತಿ ಸಂಹಿತೆ: ಚಿನ್ನ ಪ್ರಕರಣ ಹಿನ್ನೆಲೆಯಲ್ಲಿ ಸಿಪಿಎಂ ತೀರ್ಮಾನ
ಆಡಳಿತಾರೂಢ ಸಿಪಿಎಂ ಪಕ್ಷದ ಪದಾಧಿಕಾರಗಳ ತೀರ್ಮಾನ; ಜು.23ರ ಸಭೆಯಲ್ಲಿ ಸಮಗ್ರ ಚರ್ಚೆ
Team Udayavani, Jul 21, 2020, 11:30 AM IST
ತಿರುವನಂತಪುರ: ಕೇರಳದಲ್ಲಿ ಇತ್ತೀಚೆಗೆ ಚಿನ್ನದ ಕಳ್ಳಸಾಗಣೆ ಪ್ರಕರಣ ಬಯಲಾದಾಗಿನಿಂದ ಇಲ್ಲಿಯವರೆಗೆ ಅಲ್ಲಿ ಆಡಳಿತಾರೂಢ ಎಲ್‌ಡಿಎಫ್ ಒಕ್ಕೂಟದಲ್ಲಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸ್ವಪಕ್ಷವಾದ ಸಿಪಿಎಂನಲ್ಲಿ ಅನೇಕ ರೀತಿಯ ಅಸಮಾಧಾನಗಳು ಹೊಗೆಯಾಡಲು ಶುರುವಾಗಿದೆ.
ಅದರ ಪರಿಣಾಮವಾಗಿ, ಕೇರಳ ಸಚಿವ ಸಂಪುಟದ ಎಲ್ಲ ಸಚಿವರಿಗೆ ಸಂಹಿತೆ ಯನ್ನು ಜಾರಿಗೊಳಿಸಲು ಆಡಳಿ ತಾ ರೂಢ ಸಿಪಿಎಂ ಪಕ್ಷ ನಿರ್ಧರಿಸಿದೆ. ಸರಕಾರದ ಮೇಲೆ ಪಕ್ಷದ ಹಿಡಿತ ಸಡಿಲವಾಗುತ್ತಿರುವುದನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ಸಂಪುಟದ ಪ್ರಮುಖ ಸಚಿವರನ್ನೊಳಗೊಂಡ ಸಭೆಯನ್ನು ಜೂ. 23ರಂದು ನಡೆಸಲಾಗುತ್ತದೆ ಎಂದು ಸಿಪಿಎಂ ಕೇರಳ ಕಾರ್ಯದರ್ಶಿ ಕೊಡಿ ಯೇರಿ ಬಾಲಕೃಷ್ಣನ್ ಹೇಳಿದ್ದಾರೆ.
ಸರಕಾರ ಅಧಿಕಾರಕ್ಕೆ ಬಂದ ಹೊಸತರಲ್ಲಿ ಸರಕಾರದ ಮೇಲೆ ಪಕ್ಷದ ಹಿಡಿತವಿತ್ತು. ಆನಂತರ, ಹಿಡಿತ ಕಡಿಮೆಯಾಗಿ ಸಂಪುಟದಲ್ಲಿ ಪಕ್ಷದ ನಾಯಕರ ನಡುವೆ ಭಿನ್ನಮತಗಳು ಭುಗಿಲೆದ್ದು, ಪರಸ್ಪರ ದೂರುಗಳು ಕೇಳಿಬರಲಾರಂಭಿಸಿದವು. ಈ ಹಿನ್ನೆಲೆಯಲ್ಲಿ ಸಚಿವರ ನಡವಳಿಕೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿ ಗೊಳಿಸಲಾಗುತ್ತದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಇರುವುದರಿಂದ ಈ ಅಂಶ ಹೆಚ್ಚಿನ ಮಹತ್ವ ಪಡೆದಿದೆ.
ಹವಾಲಾ ನಂಟಿರಬಹುದು: ಸ್ವಪ್ನಾ ಸುರೇಶ್ ಹಾಗೂ ಇನ್ನಿತರರು ಪ್ರಮುಖ ಆರೋಪಿಗಳಾಗಿರುವ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಕಳೆದೊಂದು ವರ್ಷದಿಂದ ಏನಿಲ್ಲವೆಂದರೂ ಕನಿಷ್ಠ 20 ಹವಾಲಾ ಗುಂಪುಗಳು ಕೈ ಜೋಡಿಸಿರ ಬಹುದು ಎಂದು ಕಸ್ಟಮ್ಸ್ ಇಲಾಖೆಯ ಅಧಿಕಾರಿ ಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ಈವರೆಗೆ 13 ಮಂದಿ ಯನ್ನು ಬಂಧಿ ಸಲಾಗಿದೆ. ಆದರೆ, ಅವ ರಲ್ಲಿ ಮುಖ್ಯ ಆರೋಪಿಗಳಲ್ಲಿ ಒಬ್ಬನಾಗಿರುವ ಯುಎಇ ದೂತಾವಾಸ ಕಚೇರಿಯ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಎಸ್. ಸರಿತ್ ಕುಮಾರ್‌ಗೆ ಹವಾಲಾ ಗುಂಪುಗಳ ಜತೆಗೆ ನೇರವಾಗಿ ಅಥವಾ ಪರೋಕ್ಷವಾಗಿ ನಂಟು ಇರಬಹುದಾದ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.