ಕಾಫಿ ಡೇ ಷೇರು ಶೇ.20 ಕುಸಿತ
Team Udayavani, Jul 31, 2019, 5:02 AM IST
ನವದೆಹಲಿ: ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿರುವ ಕೆಫೆ ಕಾಫಿ ಡೇ ಮಾಲೀಕ ವಿ.ಜಿ.ಸಿದ್ಧಾರ್ಥ ನಾಪತ್ತೆ ವಿಚಾರ ಬಿಎಸ್ಇ, ಎನ್ಎಸ್ಇಯಲ್ಲಿ ಕಂಪನಿಯ ಷೇರುಗಳ ಮೇಲೂ ಪ್ರಭಾವ ಬೀರಿದೆ. ಮಂಗಳವಾರ ವಹಿವಾಟು ಆರಂಭವಾಗುತ್ತಲೇ ಷೇರು ಮಾರುಕಟ್ಟೆ ಅಧಿಕಾರಿಗಳಿಗೆ ಕಂಪನಿಯು ಸಿದ್ಧಾರ್ಥ್ ನಾಪತ್ತೆ ಕುರಿತು ಲಿಖೀತವಾಗಿ ಹೇಳಿಕೆ ಸಲ್ಲಿಸಿದೆ. ಇದಾದ ಬಳಿಕ ಕಂಪನಿ ಷೇರುಗಳು ಶೇ.20ರಷ್ಟು ಕುಸಿತ ಕಂಡವು. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ಕೆಫೆ ಕಾಫಿ ಡೇ ಎಂಟರ್ಪ್ರೈಸಸ್ ಷೇರುಗಳು ಶೇ.20ರಷ್ಟು ಕುಸಿತ ಕಂಡವು. ಹೀಗಾಗಿ, 52 ವಾರಗಳಲ್ಲಿಯೇ ಕಾಫಿ ಡೇ ಷೇರು ಮೌಲ್ಯ ಕನಿಷ್ಠ ಎಂದರೆ 154.05 ರೂ.ಗೆ ಇಳಿಕೆಯಾಯಿತು. ‘ಸೋಮವಾರದಿಂದ ಕೆಫೆ ಕಾಫಿ ಡೇ ಎಂಟರ್ಪ್ರೈಸಸ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿ.ಜಿ.ಸಿದ್ಧಾರ್ಥ ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರನ್ನು ಪತ್ತೆ ಮಾಡಲು ಸಂಬಂಧಿತ ಇಲಾಖೆಗಳ ನೆರವು ಪಡೆಯುತ್ತಿದ್ದೇವೆ’ ಎಂದು ಕಂಪನಿ ಸ್ಟಾಕ್ ಎಕ್ಸ್ಚೇಂಜ್ಗೆ ಸಲ್ಲಿಸಿದ ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.