VIDEO ಅಪಘಾತದಲ್ಲಿ ಗಾಯಗೊಂಡಿದ್ದವರ ಮೇಲೆ ಬಂದು ಗುದ್ದಿದ ಯಮರೂಪಿ ಕಾರು: ಐವರು ಸಾವು
Team Udayavani, Oct 5, 2022, 10:11 AM IST
ಮುಂಬೈ: ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, 12 ಮಂದಿ ಗಾಯಗೊಂಡ ಘಟನೆ ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ನಡೆದಿದೆ.
ಬುಧವಾರ ಮುಂಜಾನೆ 3:30ರ ಸುಮಾರಿಗೆ ಈ ಅಪಘಾತ ನಡೆದಿದೆ. ಈ ಜಾಗದಲ್ಲಿ ಕೆಲ ನಿಮಿಷಗಳ ಮೊದಲು ಅಪಘಾತವೊಂದು ನಡೆದಿತ್ತು. ಅಲ್ಲಿ ಗಾಯಗೊಂಡವರನ್ನು ಕರೆದೊಯ್ಯಲು ಬಂದಿದ್ದ ಆಂಬುಲೆನ್ಸ್ ಮತ್ತು ಇತರ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಮತ್ತೊಂದು ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಕ್ಯಾಚ್ ಹಿಡಿದು ಬೌಂಡರಿ ಗೆರೆ ತುಳಿದ ಸಿರಾಜ್ ಗೆ ನಿಂದಿಸಿದ ದೀಪಕ್; ವಿಡಿಯೋ ನೋಡಿ
ಗಾಯಾಳುಗಳನ್ನು ಬಾಂದ್ರಾದಲ್ಲಿ ವರ್ಲಿ ಲೇನ್‌ಗೆ ಕರೆದೊಯ್ಯಲು ತಂಡವು ಸಿದ್ಧತೆ ನಡೆಸುತ್ತಿದ್ದಾಗ, ಅತಿವೇಗದಿಂದ ಬಂದ ಕಾರೊಂದು ನಿಂತಿದ್ದ ವಾಹನಗಳಿಗೆ ಢಿಕ್ಕಿ ಹೊಡೆದು ಐದು ಜನರ ಸಾವಿಗೆ ಕಾರಣವಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ.
Freak Road Accident on Bandra Worli Sea link at wee hours, 5 Dead. pic.twitter.com/1Vy9r5StiU
— Deepak Rishi ਦੀਪਕ ਰਿਸ਼ੀ ਵਲੋ ਸਤਿ ਸ੍ਰਰੀ ਅਕਾਲ ਜੀ ? (@deepakrishiNDTV) October 5, 2022
ಅಪಘಾತದ ನಂತರ ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಅಧಿಕಾರಿಗಳು ಬಾಂದ್ರಾದಿಂದ ವರ್ಲಿಗೆ ಹೋಗುವ ರಸ್ತೆಯನ್ನು ಮುಚ್ಚಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
Pained by the loss of lives due to an accident on the Bandra-Worli Sea Link in Mumbai. Condolences to the bereaved families. I hope that those who have been injured have a speedy recovery: PM @narendramodi
— PMO India (@PMOIndia) October 5, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.