ಡ್ರಗ್ಸ್ ಪ್ರಕರಣ: ಹಾಸ್ಯನಟಿಯನ್ನು ಬಂಧಿಸಿದ ಎನ್ ಸಿಬಿ ಅಧಿಕಾರಿಗಳು; ಗಾಂಜಾ ವಶಕ್ಕೆ !
Team Udayavani, Nov 21, 2020, 7:15 PM IST
ನವದೆಹಲಿ: ಹಲವು ಸುತ್ತಿನ ವಿಚಾರಣೆಯ ನಂತರ ಜನಪ್ರಿಯ ಹಾಸ್ಯನಟಿ ಭಾರ್ತಿ ಸಿಂಗ್ ಅವರನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಮಾತ್ರವಲ್ಲದೆ ಭಾರ್ತಿ ಸಿಂಗ್ ಮತ್ತು ಪತಿ, ಸ್ಕ್ರಿಪ್ಟ್ ರೈಟರ್ ಹರ್ಷ್ ಲಿಂಬಾಚಿಯಾ ನಿವಾಸದಲ್ಲಿದ್ದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಭಾರ್ತಿ ಸಿಂಗ್ ಅವರನ್ನು ಭಾನುವಾರ(ನ.22) ದಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇಂದು ರಾತ್ರಿ ಎನ್ ಸಿಬಿ ಕಚೇರಿಯಲ್ಲಿಯೇ ಇರಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಚಾರಣೆಯ ವೇಳೆ ಭಾರ್ತಿ ಮತ್ತು ಆಕೆಯ ಪತಿ ಇಬ್ಬರೂ ಗಾಂಜಾ ಸೇವಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಇಂದು ಭಾರ್ತಿ ಸಿಂಗ್ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಪ ಪ್ರಮಾಣದ ಗಾಂಜಾವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.
ಇದನ್ನೂ ಓದಿ: ಅಕ್ಷಯ್, 500 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣ: ನನಗೂ ಮಾತನಾಡುವ ಹಕ್ಕಿದೆ ಎಂದ ಯೂಟ್ಯೂಬರ್
ಮಾದಕ ವಸ್ತು ಸರಬರಾಜುದಾರರಿಂದ ಲಭ್ಯವಾದ ಮಾಹಿತಿ ಮೇರೆಗೆ ಅಂಧೇರಿಯಲ್ಲಿರುವ ಲೋಖಾಂಡೆವಾಲಾ ಕಾಂಪ್ಲೆಕ್ಸ್ ನಲ್ಲಿರುವ ಭಾರ್ತಿ ಸಿಂಗ್ ನಿವಾಸದ ಮೇಲೆ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ನೇತೃತ್ವದ ತಂಡ ದಾಳಿ ನಡೆಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ: ಭೀಕರ ಅಪಘಾತ-ಕಾರಿನಲ್ಲಿದ್ದ ಏಳು ಮಂದಿ ಜೀವಂತ ದಹನ, ಓರ್ವ ಮಹಿಳೆ ಪವಾಡಸದೃಶ ಪಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
MUST WATCH
ಹೊಸ ಸೇರ್ಪಡೆ
Incentive: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್ಗೆ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.