![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 26, 2024, 5:58 PM IST
ಕೋಲ್ಕತಾ: ಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ಮತ್ತು ಆತನ ಸಹಚರರ ವಿರುದ್ಧ ಸಂದೇಶಖಾಲಿಯಲ್ಲಿ ನಡೆಸಿದ್ದಾರೆ ಎನ್ನಲಾದ ಸುಲಿಗೆ, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.
ಜನವರಿ 5 ರಂದು ಜಾರಿ ನಿರ್ದೇಶನಾಲಯದ ತಂಡದ ಮೇಲೆ ದುಷ್ಕರ್ಮಿಗಳು ನಡೆಸಿದ ದಾಳಿಯ ತನಿಖೆಯನ್ನೂ ನಡೆಸುತ್ತಿರುವ ಸಿಬಿಐ ಪ್ರಕರಣದ ಶಂಕಿತರಿಗೆ ಸಂಬಂಧಿಸಿದ ಅಡಗುತಾಣಗಳ ಮೇಲೆ ದಾಳಿ ನಡೆಸಿದ ಗಂಟೆಗಳ ಬಳಿಕ ಘಟನೆ ನಡೆದಿದೆ.
ಸ್ಥಳದಲ್ಲಿ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಫೆಡರಲ್ ಏಜೆನ್ಸಿ ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿದ್ದು, ಎನ್ ಎಸ್ ಜಿ ಕಮಾಂಡೋಗಳ ತಂಡಗಳನ್ನು ಸ್ಥಳದಲ್ಲಿ ಸದ್ಯ ನಿಯೋಜಿಸಲಾಗಿದೆ. ಪೊಲೀಸರು ಮತ್ತು ಉನ್ನತ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ತನಿಖೆ ಮುಂದುವರೆಸಿದ್ದಾರೆ.
ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಕಾಟ ನಡೆಸಲು ತೆರಳಿದ್ದ ಇಡಿ ತಂಡವನ್ನು ಷಹಜಹಾನ್ ಬೆಂಬಲಿಗರ ಗುಂಪು ಮಾರ್ಗಮಧ್ಯದಲ್ಲಿ ತಡೆದು ದಾಂಧಲೆ ನಡೆಸಿತ್ತು.
ಈ ಘಟನೆ ಬಂಗಾಲ ರಾಜಕೀಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿ ಭಾರಿ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಮಮತಾ ಬ್ಯಾನರ್ಜಿ ಅವರ ಸರಕಾರಡಾ ವಿರುದ್ಧ ಬಿಜೆಪಿ ಸೇರಿ ವಿಪಕ್ಷಗಳು., ಮಹಿಳಾ ಸಂಘಟನೆಗಳೂ ಆಕ್ರೋಶ ಹೊರ ಹಾಕಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಬಳಿಕ ಷಹಜಹಾನ್ ಬಂಧನವಾಗಿತ್ತು.
ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲಿನ ದಾಳಿಗೆ ಸಂಬಂಧಿಸಿದ ಪ್ರಕರಣದ ಬಳಿಕ 55 ದಿನಗಳ ಕಾಲ ತಲೆ ಮರೆಸಿಕೊಂಡಿದ್ದ ಷಹಜಹಾನ್ ನನ್ನ ಬಂಧಿಸಲಾಗಿತ್ತು.
You seem to have an Ad Blocker on.
To continue reading, please turn it off or whitelist Udayavani.