Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
Team Udayavani, Jul 1, 2024, 10:53 AM IST
ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ ಮತ್ತೆ ಇಳಿಕೆಯಾಗುವ ಜೊತೆಗೆ ದೇಶದ ಜನತೆಗೆ ಜುಲೈ ತಿಂಗಳ ಮೊದಲ ದಿನವೇ ಶುಭಸುದ್ದಿ ಸಿಕ್ಕಿದಂತಾಗಿದೆ.
ದೇಶದ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸೋಮವಾರ 30 ರೂಪಾಯಿ ಕಡಿತಗೊಳಿಸಿದೆ. ಅದರಂತೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,646 ರೂ.ಗಳಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ.
ಆದರೆ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸದ್ಯ 14.2 ಕೆ.ಜಿ ತೂಕದ ಸಿಲಿಂಡರ್ ದರ 803 ಆಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ. ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿಯೂ ಯಾವುದೇ ಬದಲಾವಣೆ ಇಲ್ಲ ಎನ್ನಲಾಗಿದೆ.
ಇದನ್ನು ಓದಿ: Road mishap: ವಿಶ್ವಕಪ್ ಜೋಶ್‌ನಲ್ಲಿ ಬೈಕ್ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.