ಸೇನಾ ವ್ಯವಹಾರಗಳ ಪರಾಮರ್ಶೆಗೆ ಸಮಿತಿ
Team Udayavani, Aug 18, 2019, 5:45 AM IST
ಹೊಸದಿಲ್ಲಿ: ರಕ್ಷಣಾ ಇಲಾಖೆಯ ಶಸ್ತ್ರಾಸ್ತ್ರ ಖರೀದಿ ವ್ಯವಹಾರಗಳ (ಡಿಪಿಪಿ) ಪರಾಮರ್ಶೆಗಾಗಿ ಉನ್ನತಾಧಿಕಾರದ ಸಮಿತಿಯೊಂದನ್ನು ರಚಿಸುವ ಪ್ರಸ್ತಾವನೆಗೆ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಒಪ್ಪಿಗೆ ಸೂಚಿಸಿದ್ದಾರೆ. ಶಸ್ತ್ರಾಸ್ತ್ರ ಪೂರೈಕೆಗಳಲ್ಲಿ ಆಗುವ ವಿಳಂಬ ತಪ್ಪಿಸಿ, ಪ್ರಧಾನಿ ಮೋದಿ ಆಶಯದ “ಮೇಕ್ ಇನ್ ಇಂಡಿಯಾ’ ಅಡಿ ಸೇನೆಯನ್ನು ಶಕ್ತಿಶಾಲಿಗೊಳಿಸುವ ನಿಟ್ಟಿನಲ್ಲಿ ಈ ಸಮಿತಿ ಕಾರ್ಯ ನಿರ್ವಹಿಸಲಿದೆ.
ಈ ಸಮಿತಿಗೆ ಮಹಾ ನಿರ್ದೇಶಕರೊಬ್ಬರ (ಡಿಜಿ) ಅಧ್ಯಕ್ಷತೆ ಇರಲಿದ್ದು, ಅವರ ಅಧೀನದಲ್ಲಿ ಜಂಟಿ ಕಾರ್ಯದರ್ಶಿ ಅಥವಾ ಸೇನೆಯ ಮೇಜರ್ ಜನರಲ್ ಹುದ್ದೆಗಳಿಗೆ ಸರಿಸಮಾನವೆನಿಸುವ 11 ಅಧಿಕಾರಿಗಳು ಸದಸ್ಯರಾಗಿ ಇರಲಿದ್ದಾರೆ.
ಅದಲ್ಲದೆ, ಡಿಪಿಪಿಗಳ ಪರಾಮರ್ಶೆ ಮಾತ್ರ ವಲ್ಲದೆ, ಸೇನೆಯ ಪುನಶ್ಚೇತನಕ್ಕೆ ಹೊಸ ಪರಿ ಕಲ್ಪನೆಗಳ ಪರಾಮರ್ಶೆ ಮತ್ತು ಅನುಷ್ಠಾನ, ಸಾಮಾನು- ಸರಂಜಾಮು ಸಾಗಣೆಯ ಮೇಲು ಸ್ತುವಾರಿ, ಸೇನೆಯೊಳಗಿನ ಸುವ್ಯವಸ್ಥೆ ಹಾಗೂ ಸುರಕ್ಷತೆಯ ವಾತಾವರಣ, ಸೇನೆಯ ಸ್ಥಿರಾಸ್ತಿ ವ್ಯವಹಾರಗಳ ಮೇಲುಸ್ತುವಾರಿ, ಸೇನೆಯ ಗುಣಮಟ್ಟ ಹೆಚ್ಚಳ, ಹೊಸ ಸಾರ್ಟಪ್‌ಗ್ ಳನ್ನು ಸೇನೆಯ ಅವಶ್ಯಕ ಪರಿಕರ, ತಂತ್ರಜ್ಞಾನಗಳ ಅಭಿವೃದ್ಧಿಗೆ ಪ್ರೇರೇಪಿಸುವ ಜವಾಬ್ದಾರಿಯನ್ನು ಹೊಂದಿದೆ.
2009 ಹಾಗೂ 2016ರಲ್ಲಿ ಅನು ಷ್ಠಾನಕ್ಕೆ ಬಂದಿದ್ದ ಡಿಪಿಪಿಗಳ ಪುನರ್ ಪರಿಶೀಲನೆ ಕೆಲಸ, ಹೊಸ ಸಮಿತಿಯ ಮೊದಲ ಕೆಲಸವಾಗಲಿದೆ.
ಒಎಫ್ಬಿ ಖಾಸಗೀಕರಣ ಇಲ್ಲ: ಕೇಂದ್ರ
ಭಾರತೀಯ ಸೇನೆಗೆ ಶಸ್ತ್ರಾಸ್ತ್ರವನ್ನು ತಯಾರಿಸಿ ಪೂರೈಸುವ, ಆರ್ಡಿನನ್ಸ್ ಫ್ಯಾಕ್ಟರಿ ಬೋರ್ಡ್ (ಒಎಫ್ಬಿ) ಅನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಸ್ತಾವನೆ ಕೇಂದ್ರದ ಮುಂದಿಲ್ಲ ಎಂದು ರಕ್ಷಣಾ ಇಲಾಖೆ ಸ್ಪಷ್ಟಪಡಿಸಿದೆ. ಖಾಸಗೀಕರಣವು ಕೇವಲ ವದಂತಿಯಷ್ಟೇ ಎಂದಿರುವ ಇಲಾಖೆ, ಒಎಫ್ಬಿಯ ಕಾರ್ಯಕ್ಷಮತೆ ಹೆಚ್ಚಿಸಲು ರಕ್ಷಣಾ ಇಲಾಖೆಯ ಅಧಿಕಾರಿಗಳು, ಒಎಫ್ಬಿ ಕಾರ್ಮಿಕ ಸಂಘಟನೆಗಳ ಮುಖಂಡರ ನಡುವೆ ನಿರಂತರ ಮಾತುಕತೆ ಸಾಗಿದೆ.
ಸಕಾರಾತ್ಮಕ ಹೆಜ್ಜೆಗಳಿಂದ ಒಎಫ್ಬಿಯನ್ನು ಬಲಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ. ಕೇಂದ್ರ ಸರಕಾರದ ಅಧೀನದಲ್ಲಿರುವ ಒಎಫ್ಬಿಯಲ್ಲಿ ಪ್ರಸ್ತುತ 1 ಲಕ್ಷಕ್ಕೂ ಅಧಿಕ ಸಿಬ್ಬಂದಿಯಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.