ಕನ್ಫೆಷನ್ ವ್ಯವಸ್ಥೆ ರದ್ದು ಮಾಡಿ
Team Udayavani, Jul 28, 2018, 6:00 AM IST
ಹೊಸದಿಲ್ಲಿ: ಚರ್ಚ್ಗಳಲ್ಲಿ ನಡೆಸುವ ತಪ್ಪೊಪ್ಪಿಗೆ ಹೇಳಿಕೆ (ಕನ್ಫೆಷನಲ್ ಸ್ಟೇಟ್ಮೆಂಟ್) ವ್ಯವಸ್ಥೆ ರದ್ದು ಮಾಡಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ಶಿಫಾರಸು ಮಾಡಿದೆ. ಕೇರಳದಲ್ಲಿ ಇತ್ತೀಚೆಗೆ ಬಹಿರಂಗಗೊಂಡ ಎರಡು ಲೈಂಗಿಕ ಕಿರುಕುಳ ಪ್ರಕರಣಗಳ ಬಗ್ಗೆ ತನಿಖೆ ನಡೆಸಿರುವ ಆಯೋಗವು ಕೇಂದ್ರ ಸರಕಾರಕ್ಕೆ ಇಂಥ ಸಲಹೆ ನೀಡಿದೆ.
ಎನ್ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಮಾತನಾಡಿ, ಮಹಿಳೆಯರ ಸುರಕ್ಷತೆ ದೃಷ್ಟಿ ಯಿಂದ ಈ ಕ್ರಮ ಅಗತ್ಯ. ಚರ್ಚ್ಗಳಲ್ಲಿನ ಈ ವ್ಯವಸ್ಥೆಯನ್ನು ಧರ್ಮಗುರುಗಳು ದುರುಪಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದಾಗಿ “ದ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ. ಆಯೋಗದ ಶಿಫಾರಸಿಗೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಕ್ಯಾಥಲಿಕ್ ಬಿಷಪ್ಸ್ ಕೌನ್ಸಿಲ್ ಅಧ್ಯಕ್ಷರಾದ ಆರ್ಚ್ಬಿಷಪ್ ಸೂಸಾ ಪಕಿಯಾಂ, “ಇದೊಂದು ಹಿಡನ್ ಅಜೆಂಡಾ. ತಪ್ಪೊಪ್ಪಿಗೆ ಎನ್ನುವುದು ಧರ್ಮದ ಅವಿಭಾಜ್ಯ ಅಂಗ. ಆಯೋಗವು ತನ್ನ ವ್ಯಾಪ್ತಿ ಮೀರಿ ಸಲಹೆ ನೀಡಿದೆ. ಈ ಕುರಿತು ನಾವು ಪ್ರಧಾನಿ ಮೋದಿ ಅವರಿಗೆ ಮನವಿಯೊಂದನ್ನು ಸಲ್ಲಿಸಿದ್ದೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.