ಕಾಲ್ತುಳಿತಕ್ಕೆ “ಫೂಲ್’ ಕಾರಣವೇ?
Team Udayavani, Oct 5, 2017, 7:20 AM IST
ಮುಂಬೈ: “ವ್ಯಕ್ತಿಯೊಬ್ಬ “ಫೂಲ್ ಗಿರ್ ಗಯಾ’ (ಹೂವು ಬಿದ್ದವು) ಎಂದು ಕೂಗಿದ. ಅದನ್ನು “ಪೂಲ್ ಗಿರ್ ಗಯಾ’ (ಸೇತುವೆ ಬಿತ್ತು) ಎಂದು ತಪ್ಪಾಗಿ ಭಾವಿಸಿದ ಜನ ಪ್ರಾಣದ ಹಂಗು ತೊರೆದು ಓಡಿದರು,’…
ಮುಂಬೈನ್ ಎಲ್ಫಿನ್ಸ್ಟೋನ್ ರಸ್ತೆ ಮತ್ತು ಪೆರೇಲ್ ಸಬ್ಅರ್ಬನ್ ರೈಲು ನಿಲ್ದಾಣಗಳ ನಡುವೆ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಸೆ.29ರಂದು ಸಂಭವಿಸಿದ ಕಾಲ್ತುಳಿತದಲ್ಲಿ ಬದುಕುಳಿದ ಸಂತ್ರಸ್ತ ಮಹಿಳೆಯೊಬ್ಬರು ರೈಲ್ವೆ ಅಧಿಕಾರಿಗಳಿಗೆ ನೀಡಿರುವ ಮಾಹಿತಿಯಿದು. ಸೇತುವೆ ಮೇಲೆ ನೂರಾರು ಜನ ಕಿಕ್ಕಿರಿದು ಬರುವಾಗ “ಸೇತು ಬೀಳುತ್ತಿದೆ’ ಎಂಬ ಕೂಗು ಕೇಳಿಸಿಕೊಂಡು ಜನ ದಿಕ್ಕಾಪಾಲಾಗಿ ಓಡಿದ್ದರಿಂದ ಕಾಲು¤ಳಿತ ಸಂಭವಿಸಿತು.
ಪರಿಣಾಮ ಇಬ್ಬರು ಕನ್ನಡಿಗರೂ ಸೇರಿ 23 ಮಂದಿ ಅಸುನೀಗಿದ್ದರು. ಈ ಘಟನೆ ಕುರಿತು ತನಿಖೆ ನಡೆಸುತ್ತಿರುವ ಪಶ್ಚಿಮ ರೈಲ್ವೆ ಅಧಿಕಾರಿಗಳು, ಸಂತ್ರಸ್ತರು ಹಾಗೂ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. “ಸೇತುವೆ ಮೇಲೆ ನಡೆದುಹೋ ಗುತ್ತಿದ್ದ ಹೂವಿನ ವ್ಯಾಪಾರಿಯೊಬ್ಬ “ಫೂಲ್ ಗಿರ್ ಗಯಾ’ ಎಂದು ಕೂಗಿಕೊಂಡಿದ್ದನ್ನು ಜನ ತಪ್ಪಾಗಿ ಕೇಳಿಸಿಕೊಂಡಿದ್ದೇ ನೂಕುನುಗ್ಗಲು, ಕಾಲ್ತುಳಿತಕ್ಕೆ ಕಾರಣವಾಯಿತು,’ ಎಂದು ಗಾಯಗೊಂಡಿದ್ದ ಮಹಿಳೆಯೊಬ್ಬರು ಸಮಿತಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.