ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್; ಕಾಂಗ್ರೆಸ್ ಭರವಸೆ
ಪ್ರತಿ ತಿಂಗಳು ಬಡ ಮಹಿಳೆಯರಿಗೆ 1,500 ರೂ. ಆರ್ಥಿಕ ನೆರವು
Team Udayavani, Aug 8, 2022, 5:01 PM IST
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಮತ್ತು ಬಡ ಮಹಿಳೆಯರಿಗೆ 1,500 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್ ಸೋಮವಾರ ಭರವಸೆ ನೀಡಿದೆ.
ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ಪಕ್ಷ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಮಾಡಿದಂತೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭರವಸೆ ನೀಡಿದರು.
ಮಾಧ್ಯಮದವರೊಂದಿಗೆ ನಡೆಸಿದ ಸಂವಾದದ ವೇಳೆ ಹಿರಿಯ ಕಾಂಗ್ರೆಸ್ ನಾಯಕರು ಈ ಘೋಷಣೆ ಮಾಡಿದ್ದಾರೆ.
ಹಣದ ಲಭ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭರವಸೆಗಳನ್ನು ಈಡೇರಿಸಲು ರಾಜ್ಯ ಬಜೆಟ್ನಲ್ಲಿ ಸೂಕ್ತ ನಿಬಂಧನೆಗಳನ್ನು ಮಾಡಲಾಗುವುದು ಎಂದು ಬಘೇಲ್ ಹೇಳಿದರು.
ಇದನ್ನೂ ಓದಿ:ಕೊನೆಗೂ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್
ಈ ಭರವಸೆಗಳನ್ನು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು, ಅದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಹಿಮಾಚಲ ಪ್ರದೇಶಕ್ಕೆ ಡಿಸೆಂಬರ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.