ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಿ: ಕಾಂಗ್ರೆಸ್ ಆಗ್ರಹ
Team Udayavani, May 17, 2018, 3:31 PM IST
ಹೊಸದಿಲ್ಲಿ : ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ ಎಸ್ ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕಾಂಗ್ರೆಸ್ ಪಕ್ಷ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳನ್ನು ಆಗ್ರಹಿಸಿದೆ.
2011ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರು ಕರ್ನಾಟಕದ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರು ರಾಜ್ಯದಲ್ಲಿನ ಆಳುವ ಬಿಜೆಪಿ ಸರಕಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅವರನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳನ್ನು ಆಗ್ರಹಿಸಿದ್ದರು.
ಮೋದಿ ಅವರು 2011ರ ಮೇ 19ರಂದು ಮಾಡಿದ್ದ ಟ್ವೀಟ್‌ನಲ್ಲಿ “ಕರ್ನಾಟಕದ ರಾಜ್ಯಪಾಲರು ಭಾರತದ ಒಕ್ಕೂಟ ಸಂರಚನೆಯನ್ನು ನಾಶಮಾಡುವುದಕ್ಕೆ ಕಟಿಬದ್ಧರಾಗಿರುವಂತಿದೆ; ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು’ ಎಂದು ಹೇಳಿದ್ದರು.
ಅಂದು ಮೋದಿ ಮಾಡಿದ್ದ ಟ್ವೀಟನ್ನೇ ಈಗ ಕಾಂಗ್ರೆಸ್ ಪಕ್ಷ ಉಲ್ಲೇಖೀಸಿ ‘ಹಾಲಿ ಸ್ಥಿತಿಯಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ನಡೆದಿರುವ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು’ ಎಂದು ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.