‘ಕೈಗೊಂಬೆ ಅಧ್ಯಕ್ಷ’ರನ್ನು ಮಾಡಿದರೆ ಕಾಂಗ್ರೆಸ್ಗೆ ಉಳಿಗಾಲವಿಲ್ಲ: ಪೃಥ್ವಿರಾಜ್ ಚೌಹಾಣ್
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಎಚ್ಚರಿಕೆ
Team Udayavani, Aug 28, 2022, 5:47 PM IST
ಮುಂಬಯಿ: ಪಕ್ಷವು ತನ್ನ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ಪ್ರಕಟಿಸಿರುವಂತೆಯೇ, ”ಯಾರನ್ನಾದರೂ ‘ಕೈಗೊಂಬೆ ಅಧ್ಯಕ್ಷ’ರನ್ನಾಗಿ ಮಾಡಿದರೆ ಕಾಂಗ್ರೆಸ್ಗೆ ಉಳಿಗಾಲವಿಲ್ಲ” ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಭಾನುವಾರ ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸೇರಿದಂತೆ ಎಲ್ಲಾ ಹುದ್ದೆಗಳಿಗೆ ಚುನಾವಣೆ ನಡೆಯಬೇಕು ಎಂದು ಹೇಳಿದ ಜಿ-23 ಭಿನ್ನಮತೀಯ ಗುಂಪಿನ ಸದಸ್ಯ ಚೌಹಾಣ್, ಪಕ್ಷವನ್ನು ಉಳಿಸಲು ತುರ್ತು ಕ್ರಮಗಳ ಅಗತ್ಯವಿದೆ ಮತ್ತು “ಹಿಂಬದಿ ಸೀಟಿನ ಚಾಲನೆ” ಕೆಲಸ ಮಾಡುವುದಿಲ್ಲ ಎಂದು ಹೇಳಿದರು.
ರಾಹುಲ್ ಗಾಂಧಿ ಅಧ್ಯಕ್ಷರಾಗಲು ಬಯಸದಿದ್ದರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಮತ್ತು ಚುನಾವಣೆಯ ಮೂಲಕ ಹೊಸ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ.
ಗುಲಾಂ ನಬಿ ಆಜಾದ್ ಅವರ ರಾಜೀನಾಮೆ ಕುರಿತು , “ಅವರ ರಾಜೀನಾಮೆ ದುರದೃಷ್ಟಕರ… ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಇವೆ. ಅತ್ಯಂತ ಕಿರಿಯ ಮತ್ತು ಹೊರಗಿನ ತಾರಿಕ್ ಹಮೀದ್ ಕರ್ರಾ ಅವರನ್ನು ರಾಜಕೀಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಮತ್ತು ಆಜಾದ್ ಸಾಹೇಬ್ ಅವರನ್ನು ಸದಸ್ಯರನ್ನಾಗಿ ಮಾಡಲಾಯಿತು, ಇದಕ್ಕೆ ಕಾರಣವೇನು? ಇದನ್ನು ಚರ್ಚಿಸಲಾಗಿದೆಯೇ? ಎಂದು ಚೌಹಾಣ್ ಕೇಳಿದರು.
ಒಂದೆಡೆ ಸೋನಿಯಾ ಗಾಂಧಿ ಅವರು ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಅವರಂತಹ ನಾಯಕರನ್ನು ಚುನಾವಣಾ ಪ್ರಚಾರಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಿದರು. ಅವರಿಗೆ ಒಂದಷ್ಟು ಜವಾಬ್ದಾರಿಯನ್ನೂ ನೀಡಲಾಗಿತ್ತು. ಆಜಾದ್ ಸಾಹೇಬರು ‘ಕೋಟೆರಿ’ ಎಂದು ಕರೆಯುತ್ತಿದ್ದ ತಳಮಟ್ಟದ ಜನರು ಸೋನಿಯಾ ಅವರ ಮಾತನ್ನೂ ಕೇಳಲಿಲ್ಲ ಎಂದು ಚೌಹಾಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.