ಗಾಂಧಿ ಹತ್ಯೆಯಿಂದ ಲಾಭವಾಗಿರುವುದು ಕಾಂಗ್ರೆಸಿಗೆ: ಉಮಾ ಭಾರತಿ
Team Udayavani, Oct 14, 2017, 9:40 AM IST
ಹೊಸದಿಲ್ಲಿ: ಮಹಾತ್ಮಾ ಗಾಂಧಿ ಹತ್ಯೆಯಿಂದ ಲಾಭವಾಗಿರುವುದು ಕಾಂಗ್ರೆಸಿಗೆ ಎಂದು ಕೇಂದ್ರ ಸಚಿವೆ ಉಮಾ ಭಾರತಿ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಸಿಕ್ಕಿದ ಬಳಿಕ ಕಾಂಗ್ರೆಸ್ ವಿಸರ್ಜನೆಯಾಗಬೇಕೆಂದು ಗಾಂಧೀಜಿ ಬಯಸಿದ್ದರು, ಅವರು ಆ ಕುರಿತು ಘೋಷಣೆಯನ್ನೂ ಮಾಡಿದ್ದರು. ಆದರೆ ಹತ್ಯೆಯಾದ ಕಾರಣ ಗಾಂಧೀಜಿ ಆಶಯ ಈಡೇರದೆ ಕಾಂಗ್ರೆಸ್‌ಗೆ ಲಾಭವಾಯಿತು ಎಂದಿದ್ದಾರೆ.
ಮಹಾತ್ಮಾ ಗಾಂಧಿ ಹತ್ಯಾ ತನಿಖೆಯನ್ನು ಮರುಪ್ರಾರಂಭಿಸಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿರುವ ಕುರಿತು ಪ್ರತಿಕ್ರಿಯಿಸಿದ ಉಮಾ ಭಾರತಿ , ನಿಜವಾಗಿ ನೋಡಿದರೆ ಗಾಂಧಿ ಹತ್ಯೆಯಿಂದ ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಹೆಚ್ಚು ಹಾನಿಯಾಗಿದೆ. ನಾವು ಜೈಲಿಗೆ ಹೋದೆವು ಹಾಗೂ ಈಗಲೂ ನಾವು ಅದರ ಪರಿಣಾಮವನ್ನು ಅನುಭವಿಸುತ್ತಿದ್ದೇವೆ. ದೇಶಕ್ಕೂ ಭಾರೀ ಹಾನಿಯಾಗಿದೆ. ಆದರೆ ಕಾಂಗ್ರೆಸ್ ಭರಪೂರ ಲಾಭ ಮಾಡಿತು. ವಿಸರ್ಜನೆಯಾಗಬೇಕಾದ ಪಕ್ಷ 6 ದಶಕ ಅಧಿಕಾರ ಅನುಭವಿಸಿತು ಎಂದಿದ್ದಾರೆ. ಗಾಂಧಿ ದೇಹದಲ್ಲಿದ್ದ ನಾಲ್ಕನೇ ಗುಂಡಿನ ಕುರಿತು ತನಿಖೆ ನಡೆಸಲು ಆಗ್ರಹಿಸಿ ಪಂಕಜ್ ಫಡ್ನಿಸ್ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದು ಈ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.