ಕಾಂಗ್ರೆಸ್ ಮಾಡಿದ ರಸ್ತೆ,ವಿಮಾನ ನಿಲ್ದಾಣ ಸೇರಿ ಎಲ್ಲವನ್ನೂ ಬಿಜೆಪಿ ಮಾರುತ್ತಿದೆ:ಪ್ರಿಯಾಂಕಾ
Team Udayavani, Oct 31, 2021, 6:20 PM IST
ನವದೆಹಲಿ:’ಕಳೆದ 70 ವರ್ಷಗಳಿಂದ ಕಾಂಗ್ರೆಸ್ ನಿರ್ಮಿಸಿದ ರೈಲ್ವೆ, ವಿಮಾನ ನಿಲ್ದಾಣ ಮತ್ತು ರಸ್ತೆಗಳನ್ನು ಬಿಜೆಪಿ ಮಾರಾಟ ಮಾಡುತ್ತಿದೆ’ ಎಂದು ಭಾನುವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ
ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಕಾಂಗ್ರೆಸ್ ರೈಲ್ವೆ, ವಿಮಾನ ನಿಲ್ದಾಣ, ರಸ್ತೆಗಳನ್ನು ನಿರ್ಮಿಸಿತು. ಅವೆಲ್ಲವನ್ನೂ ಮಾರುತ್ತಿದ್ದಾರೆ. 70 ವರ್ಷಗಳಲ್ಲಿ ನಾವು ಏನು ಮಾಡಿದ್ದೇವೆ ಎಂದು ಅವರು ಕೇಳುತ್ತಾರೆ. ಅವರು ಕೇವಲ 7 ವರ್ಷಗಳಲ್ಲಿ 70 ವರ್ಷಗಳ ಪ್ರಯತ್ನವನ್ನು ವ್ಯರ್ಥ ಮಾಡಿದ್ದಾರೆ, ”ಎಂದರು.
‘ನಿರುದ್ಯೋಗವನ್ನು ರಾಜ್ಯದ ಪ್ರಮುಖ ಸಮಸ್ಯೆಯಾಗಿದೆ. ಯುಪಿಯಲ್ಲಿ 5 ಕೋಟಿ ನಿರುದ್ಯೋಗಿ ಯುವಕರಿದ್ದಾರೆ. ನಿರುದ್ಯೋಗದಿಂದ ಪ್ರತಿದಿನ ಮೂವರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ,” ಎಂದರು.
ಇದನ್ನೂ ಓದಿ:- ರಬಕವಿಯಲ್ಲಿ 4 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ
‘ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರವು ಎಲ್ಲಾ ಜಾತಿಗಳು ಮತ್ತು ವರ್ಗಗಳ ಜನರನ್ನು ಶೋಷಣೆ ಮಾಡುತ್ತಿದೆ’ ಎಂದು ಅವರು ಆರೋಪಿಸಿದರು.
“ದಲಿತರು, ನೇಕಾರರು, ಒಬಿಸಿಗಳು, ಬಡವರು, ಅಲ್ಪಸಂಖ್ಯಾತರು ಮತ್ತು ಬ್ರಾಹ್ಮಣರು ಶೋಷಣೆಗೆ ಒಳಗಾಗಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಗುರು ಗೋರಖನಾಥರ ಬೋಧನೆಗೆ ವಿರುದ್ಧವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಈ ಸರ್ಕಾರ ಪ್ರತಿನಿತ್ಯ ಜನರ ಮೇಲೆ ಹಲ್ಲೆ ನಡೆಸುತ್ತಿದೆ” ಎಂದು ಗಾಂಧಿ ಹೇಳಿದರು.
ಯುಪಿ ಚುನಾವಣೆಗಾಗಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಸಹಯೋಗದಲ್ಲಿ ಕೆಲಸ ಮಾಡಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು.
“ಎಸ್‌ಪಿ ಮತ್ತು ಬಿಎಸ್‌ಪಿಯವರು ಕಾಂಗ್ರೆಸ್ ಬಿಜೆಪಿಯೊಂದಿಗೆ ಶಾಮೀಲಾಗಿ ಕೆಲಸ ಮಾಡುತ್ತಿದೆ ಎಂದು ಹೇಳುತ್ತಾರೆ. ನಾನು ಆರೋಪಿಸುವವರಿಗೆ ಕೇಳಲು ಬಯಸುತ್ತೇನೆ – ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮ್ಮೊಂದಿಗೆ ಏಕೆ ನಿಲ್ಲಬಾರದು. ಕಾಂಗ್ರೆಸ್ ಮಾತ್ರ ಹೋರಾಡುತ್ತಿದೆ ಎಂದು ಯಾಕೆ ಹೇಳುತ್ತೀರಿ. ನಾನು ಬೇಕಾದರೆ ಸಾಯುತ್ತೇನೆ ಆದರೆ ಬಿಜೆಪಿಯೊಂದಿಗೆ ಯಾವುದೇ ರೀತಿಯ ಸಂಬಂಧವನ್ನು ಹೊಂದುವುದಿಲ್ಲ” ಎಂದು ಅವರು ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.