Youth Congress ಬ್ಯಾಂಕ್ ಖಾತೆಗಳ ಸ್ಥಗಿತ,ಪ್ರತಿಭಟನೆ; ತೆರಿಗೆ ನ್ಯಾಯಮಂಡಳಿಯಿಂದ ರಿಲೀಫ್
ಪಕ್ಷದಿಂದ 210 ಕೋಟಿ ರೂ. ಆದಾಯ ತೆರಿಗೆ ಕೇಳಲಾಗಿದೆ ಎಂದ ಮಾಕೆನ್
Team Udayavani, Feb 16, 2024, 2:49 PM IST
ಹೊಸದಿಲ್ಲಿ: ‘ಯುವ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಹೇಳಿಕೆ ನೀಡಿದ ಬೆನ್ನಲ್ಲೇ, ”ಪಕ್ಷದ ಬ್ಯಾಂಕ್ ಖಾತೆಗಳ ಕಾರ್ಯ ನಿರ್ವಹಣೆಗೆ ಯಾವುದೇ ನಿರ್ಬಂಧಗಳಿಲ್ಲ” ಎಂದು ತೆರಿಗೆ ನ್ಯಾಯಮಂಡಳಿ(tax tribunal) ಹೇಳಿದೆ.
ಮಾಕೆನ್ ಹೇಳಿದ್ದೇನು?
“ಕಾಂಗ್ರೆಸ್ ಪಕ್ಷದ ಖಾತೆಗಳನ್ನೂ ಜಪ್ತಿ ಮಾಡಲಾಗಿದ್ದು. ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಿಂದ 210 ಕೋಟಿ ರೂ.ಆದಾಯ ತೆರಿಗೆ ಕೇಳಲಾಗಿದೆ. ನಮ್ಮ ಖಾತೆಗಳಲ್ಲಿ ಕ್ರೌಡ್ ಫಂಡಿಂಗ್ ಹಣವನ್ನು ಸ್ಥಗಿತಗೊಳಿಸಲಾಗಿದೆ. ಚುನಾವಣೆಗೆ ಎರಡು ವಾರಗಳ ಮೊದಲು, ಪ್ರತಿಪಕ್ಷಗಳ ಖಾತೆಗಳನ್ನು ಸ್ಥಗಿತಗೊಳಿಸಿರುವುದು ಪ್ರಜಾಪ್ರಭುತ್ವವನ್ನು ಹೆಪ್ಪು ಗಟ್ಟಿಸಿರುವುದಕ್ಕೆ ಸಮಾನವಾಗಿದೆ” ಎಂದು ಮಾಕೆನ್ ಹೇಳಿದರು.
ಕೇಂದ್ರದ ಚುನಾವಣ ಬಾಂಡ್‌ಗಳ ಯೋಜನೆ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಮರುದಿನ ಈ ವಿದ್ಯಮಾನ ನಡೆದಿದೆ.
ನಿರ್ಬಂಧಗಳಿಲ್ಲ
ಪಕ್ಷದ ಬ್ಯಾಂಕ್ ಖಾತೆಗಳ ಕಾರ್ಯ ನಿರ್ವಹಣೆಗೆ ಯಾವುದೇ ನಿರ್ಬಂಧಗಳಿಲ್ಲ” ಎಂದು ತೆರಿಗೆ ನ್ಯಾಯಮಂಡಳಿ(tax tribunal) ಹೇಳಿದೆ. ಈ ಬೆಳವಣಿಗೆಯನ್ನು ರಾಜ್ಯಸಭಾ ಸಂಸದ ಮತ್ತು ವಕೀಲ ವಿವೇಕ್ ಟಂಖಾ ಅವರು ದೃಢಪಡಿಸಿದ್ದು, ದೆಹಲಿಯ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಪೀಠದ ಮುಂದೆ ಕಾಂಗ್ರೆಸ್ ಪಕ್ಷದ ಪರವಾಗಿ ಹಾಜರಾಗಿದ್ದೆ ಎಂದು ಹೇಳಿದ್ದಾರೆ.
ನ್ಯಾಯಮಂಡಳಿ ಎದುರು, ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಟಂಖಾ ವಾದಿಸಿದ್ದರು.
ದೆಹಲಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಮತ್ತು ಇತರ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
#WATCH | Delhi: Indian Youth Congress national president Srinivas BV and other leaders detained by Police. pic.twitter.com/zLQlmAX4zQ
— ANI (@ANI) February 16, 2024
ಬಿಜೆಪಿ ಶಾಸಕ ಡಾ. ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯಿಸಿ ” ಪ್ರತಿಯೊಬ್ಬರಿಗೂ ದೇಶದ ಕಾನೂನು ಅನ್ವಯಿಸುತ್ತದೆ, ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಮಾರ್ಗವಿಲ್ಲ, ಯಾವುದೇ ಉಲ್ಲಂಘನೆಯಾದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ, ಅವರು ಎಲ್ಲೆಡೆ ರಾಜಕೀಯ ಮಾಡಲು ಪ್ರಯತ್ನಿಸಿ ರಾಜಕೀಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಯಾವಾಗಲೂ ಹಣವನ್ನು ಅಕ್ರಮ ವಿಧಾನಗಳ ಮೂಲಕ ಸಂಗ್ರಹಿಸುವ ಮಾರ್ಗ ಹೊಂದಿದ್ದಾರೆ ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.