ಗುಜರಾತ್‌ನಿಂದಲೇ ಕೈ ಕಹಳೆ


Team Udayavani, Mar 13, 2019, 12:30 AM IST

x-36.jpg

ಅಹ್ಮದಾಬಾದ್‌: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಎರಡು ದಿನ ಕಳೆದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನಿಂದಲೇ ಕಾಂಗ್ರೆಸ್‌ ಚುನಾವಣೆ ರಣಕಹಳೆ ಮೊಳಗಿಸಿದೆ. ಮಹಾತ್ಮಾ ಗಾಂಧೀಜಿ ಅವರು ದಂಡಿಯಾತ್ರೆ ಕೈಗೊಂಡ ದಿನದಂದೇ ಅಹ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ, “ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಭದ್ರತೆಯ ವಿಚಾರವನ್ನು ವೈಫ‌ಲ್ಯಗಳನ್ನು ಮುಚ್ಚಿಕೊಳ್ಳಲು ಗುರಾಣಿಯನ್ನಾಗಿ ಬಳಕೆ ಮಾಡುತ್ತಿದ್ದಾರೆ’ ಎಂದು ನಿರ್ಣಯ ಕೈಗೊಂಡಿದೆ. ಕಾಂಗ್ರೆಸ್‌ ನುಡಿದಂತೆ ನಡೆದಿದೆ. ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ. ಜನರ ವಿಶ್ವಾಸಕ್ಕೆ ಎಂದೂ ಧಕ್ಕೆಯಾಗದಂತೆ ನೋಡುತ್ತದೆ ಎಂದೂ ಪಕ್ಷ ಹೇಳಿದೆ.

ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಮಾತನಾಡಿ, ದೇಶದಲ್ಲಿ ಅಭದ್ರತೆ ಮತ್ತು ಆತಂಕದ ವಾತಾವರಣವಿದೆ ಎಂದಿದ್ದಾರೆ. 1961ರ ಬಳಿಕ ಗುಜರಾತ್‌ನಲ್ಲಿ ಮೊದಲ ಬಾರಿಗೆ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರಿಯಾಂಕಾ ವಾದ್ರಾ ಭಾಗವಹಿಸಿದ್ದು ಪ್ರಧಾನ ಅಂಶ. ಆರ್‌ಎಸ್‌ಎಸ್‌ ಮತ್ತು ಬಿಜೆಪಿ ತತ್ವ ಗಳನ್ನು ಸೋಲಿಸಲು ಯಾವುದೇ ದೊಡ್ಡ ಮಟ್ಟದ ತ್ಯಾಗ ಅಗತ್ಯವಿಲ್ಲ. ಅದು ದ್ವೇಷ, ಕೋಪ ಮತ್ತು ಸಮಾಜದ ವಿವಿಧ ವರ್ಗಗಳ ನಡುವೆ ಕಂದಕ ಸೃಷ್ಟಿಸುವ ನಿಲುವುಗಳನ್ನು ಹೊಂದಿದೆ ಎಂದು ಹೇಳಿದ್ದಾರೆ. ಅದನ್ನು ಸೋಲಿಸುವುದೇ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಮಹಾತ್ಮಾ ಗಾಂಧೀಜಿ ದಂಡಿಯಾತ್ರೆ ಕೈಗೊಂಡು 89 ವರ್ಷ ಪೂರ್ತಿಗೊಳಿಸಿದ ಬೆನ್ನಲ್ಲೇ ಇಂಥ ನಿರ್ಧಾರ ಕೈಗೊಂಡಿದ್ದೇವೆ ಎಂದರು.

ಸಭೆಯ ಬಳಿಕ ಆಯೋಜಿಸಲಾಗಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಆಧುನಿಕ ಭಾರತದಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳೂ ನ್ಯಾಯ ಕೇಳುವಂತಾಗಿದೆ ಎಂದು ಮೋದಿ ನೇತೃತ್ವದ ಸರಕಾರದ ಕಾರ್ಯವೈಖರಿಯ ಬಗ್ಗೆ ವಾಗ್ಧಾಳಿ ನಡೆಸಿದರು. ದೇಶದಲ್ಲಿನ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುವ ಮತ್ತು ನಾಶಗೊಳಿಸುವ ಪ್ರಯತ್ನ ಕೇಂದ್ರ ಸರಕಾರದಿಂದ ನಡೆಯುತ್ತಿದೆ ಎಂದೂ ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯ ಮೂರ್ತಿಗಳು ಸುದ್ದಿಗೋಷ್ಠಿ ನಡೆಸಿದ್ದನ್ನು ಪ್ರಸ್ತಾವಿಸಿದರು.

ಈ ಸರಕಾರ ನಿಜವಾದ ವಿಚಾರಗಳ ಬಗ್ಗೆ ಮಾತನಾಡುತ್ತಿಲ್ಲ. ಸುಳ್ಳು ಮಾಹಿತಿ ನೀಡಲಾಗುತ್ತಿದೆ. ಜನರ ದಾರಿ ತಪ್ಪಿಸಲಾಗುತ್ತಿದೆ. ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲಿಯೇ ಅಧಿಕವಾಗಿ ಬಾಧಿಸುತ್ತಿದೆ. ಯುವ ಜನರು ಕೆಲಸ ಇಲ್ಲದೆ ಅಲೆದಾಡುತ್ತಿದ್ದಾರೆ. ಇವುಗಳ ಬಗ್ಗೆ ಮೌನ ವಹಿಸಲಾಗಿದೆ ಎಂದು ಸರಕಾರದ ವಿರುದ್ಧ ರಾಹುಲ್‌ ಗಾಂಧಿ ಹರಿಹಾಯ್ದರು.

15 ಲಕ್ಷ ರೂ. ಎಲ್ಲಿ?: ಪ್ರಿಯಾಂಕಾ
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಚುನಾವಣ ರ್ಯಾಲಿಯಲ್ಲಿ ಮಾತನಾಡಿದ ಪ್ರಿಯಾಂಕಾ ವಾದ್ರಾ, ಪ್ರಧಾನಿ ನರೇಂದ್ರ ಮೋದಿ ಈಡೇರಿಸಲಾಗದ ಭರವಸೆಗಳನ್ನು ನೀಡಿದ್ದಾರೆ ಎಂದು ಟೀಕಿಸಿದರು. ದೇಶದಲ್ಲಿ ದ್ವೇಷವನ್ನು ಹರಡಲಾಗುತ್ತಿದೆ. ವಿವಿಧ ಸಾಂಸ್ಥಿಕ ಸಂಸ್ಥೆಗಳನ್ನು ದುರ್ಬಲ ಮತ್ತು ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ನಿಮ್ಮ ಮತವೇ ಆಯುಧ. ಅದನ್ನು ಯೋಚಿಸಿ ಬಳಕೆ ಮಾಡಿ ಎಂದು ಸೂಚ್ಯವಾಗಿ ಹೇಳಿದರು ಪ್ರಿಯಾಂಕಾ ವಾದ್ರಾ. ಜಾಗೃತ ಪ್ರಜೆಗಿಂತ ದೊಡ್ಡ ದೇಶಭಕ್ತನಿಲ್ಲ ಎಂದು ಹೇಳಿದ ಸೋನಿಯಾ ಪುತ್ರಿ, ನಾನು ನನ್ನ ಹೃದಯದಿಂದಲೇ ಮಾತನಾಡುತ್ತಿದ್ದೇನೆ ಎಂದರು. ನಾನು ಮತ್ತು ನೀವೆಲ್ಲರೂ ದೇಶಕ್ಕಾಗಿ ದುಡಿಯೋಣ ಮತ್ತು ಮುಂದಕ್ಕೆ ಸಾಗೋಣ ಎಂದರು. 2 ಕೋಟಿ ಉದ್ಯೋಗ ನೀಡಿಕೆ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವ ವಾಗ್ಧಾನಗಳೇನಾದವು ಎಂದು ಪ್ರಿಯಾಂಕಾ ಅವರು ಕಟುವಾಗಿ ಪ್ರಶ್ನಿಸಿದರು.

ರಾಷ್ಟ್ರೀಯ ಭದ್ರತೆ ವಿಚಾರ ದುರುಪಯೋಗ
ರಾಷ್ಟ್ರೀಯ ಭದ್ರತೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ದುರುಪಯೋಗ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ತಮ್ಮ ವೈಫ‌ಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಅದನ್ನು ಗುರಾಣಿಯಂತೆ ಬಳಕೆ ಮಾಡುತ್ತಿದ್ದಾರೆ ಎಂದು ಸಿಡಬುÉ éಸಿ ಸಭೆಯ ನಿರ್ಣಯದಲ್ಲಿ ದೂರಲಾಗಿದೆ. ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಹೋರಾಟ ನಡೆಸಲು ಮತ್ತು ಅದರ ವೈಫ‌ಲ್ಯಗಳನ್ನು ಬಯಲಿಗೆ ಎಳೆಯಲು ಎಲ್ಲ ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಮತ್ತು ಅವುಗಳು ತಮ್ಮ ಸಾಮರ್ಥ್ಯವನ್ನು ಅದಕ್ಕಾಗಿ ವಿನಿಯೋಗ ಮಾಡಬೇಕು ಎಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ. ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಅತ್ಯಂತ ಭದ್ರವಾಗಿದೆ. ಜತೆಗೆ ಸದೃಢ ಸೇನಾ ಬಲವನ್ನೂ ಹೊಂದಿದ್ದು, ಅದಕ್ಕಾಗಿ ಹೆಮ್ಮೆ ಪಡಬೇಕಾಗಿದೆ. ಮಹಿಳೆಯರು, ಎಸ್‌ಸಿ, ಎಸ್‌ಟಿ, ಇತರ ಹಿಂದುಳಿದ ವರ್ಗದವರು, ಅಲ್ಪಸಂಖ್ಯಾಕರು, ಬರಹಗಾರರು, ಶಿಕ್ಷಣ ತಜ್ಞರ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ. ಹೀಗಾಗಿ ಅವರೆಲ್ಲರೂ ಭಯ ಮತ್ತು ಅಭದ್ರತೆಯಿಂದ ಇರುವಂತಾಗಿದೆ ಎಂದು ಸರಕಾರವನ್ನು ಟೀಕಿಸಲಾಗಿದೆ. ದೇಶದಲ್ಲಿ ಉತ್ತರದಾಯಿತ್ವ ಮತ್ತು ಉತ್ತಮ ಆಡಳಿತ ನೀಡುವ ಸರಕಾರ ಅಗತ್ಯವಾಗಿದೆ ಎಂದು ಸಮಿತಿ ಪ್ರತಿಪಾದಿಸಿದೆ. 1930ರ ಮಾ.12ರಂದು ಮಹಾತ್ಮಾ ಗಾಂಧಿ ದಂಡಿಯಾತ್ರೆ ಆರಂಭಿಸಿದ 89ನೇ ವರ್ಷಾಚರಣೆ ಪ್ರಯುಕ್ತ ಅವರಿಗೆ ಗೌರವವನ್ನೂ ಪಕ್ಷ ಸಲ್ಲಿಸಿದೆ. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಕಾಂಗ್ರೆಸ್‌ ನಾಯಕರಾದ ಆನಂದ ಶರ್ಮಾ, ಗುಲಾಂ ನಬಿ ಆಜಾದ್‌ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

58 ವರ್ಷ ಬಳಿಕ
ಗುಜರಾತ್‌ನ ಭಾವನಗರದಲ್ಲಿ 1961ರಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಆ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಸಭೆ ಅಲ್ಲಿ ನಡೆದಿದೆ.

ಮಾ. 18: ಕಲಬುರಗಿಗೆ ರಾಹುಲ್‌ ಗಾಂಧಿ
ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಮಾ.18ರಂದು ಕಲಬುರಗಿಗೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಪರ ಚುನಾವಣ ಪ್ರಚಾರ ಸಭೆಯಲ್ಲಿ ಭಾಗವಹಿಸಲಿರುವರು. ಈ ಕ್ಷೇತ್ರವನ್ನು ಜಯಿಸಲು ಬಿಜೆಪಿ ತಂತ್ರಗಾರಿಕೆ ಹೆಣೆದಿದ್ದು, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕೂಡ ತಂತ್ರ ಹೂಡಿ ರಾಹುಲ್‌ ಅವರನ್ನು ಪ್ರಚಾರಕ್ಕೆ ಕರೆಸಿದೆ.

ಸೀಟು ಹಂಚಿಕೆ: ರಾಹುಲ್‌ ಜತೆ ಸಿದ್ದು ಚರ್ಚೆ
ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜತೆ ಸಿದ್ದರಾಮಯ್ಯ ಮಂಗಳವಾರ ಮಾತುಕತೆ ನಡೆಸಿದ್ದಾರೆ. ಮೈಸೂರು, ತುಮಕೂರು ಕ್ಷೇತ್ರದ ಬದಲು ಉಡುಪಿ-ಚಿಕ್ಕಮಗಳೂರು ಮತ್ತು ಉ.ಕನ್ನಡ ಕ್ಷೇತ್ರ ಬಿಟ್ಟು ಕೊಡುವ ಬಗ್ಗೆ ಜೆಡಿಎಸ್‌ನ ಮನವೊಲಿಸುವುದಾಗಿ ರಾಹುಲ್‌ ತಿಳಿಸಿದ್ದಾರೆ ಎನ್ನಲಾಗಿದೆ.

ಮೋದಿ ಸರಕಾರದ ವಿರುದ್ಧ  ಮಾಡಿರುವ ಆರೋಪಗಳೆಲ್ಲ ಸುಳ್ಳು. ಮಹಾತ್ಮಾ ಗಾಂಧಿಯವರ ನಾಡಿನಿಂದ ಕಾಂಗ್ರೆಸ್‌ ಸುಳ್ಳುಗಳನ್ನು ಹರಡಲು ಪ್ರಯತ್ನಿಸುತ್ತಿದೆ. ರಾಹುಲ್‌ ಗಾಂಧಿ, ಪ್ರಿಯಾಂಕಾ ವಾದ್ರಾ ತಳಮಳಕ್ಕೊಳಗಾಗಿ ಮಾತನಾಡಿದ್ದಾರೆ.
ಪ್ರಕಾಶ್‌ ಜಾಬ್ಡೇಕರ್‌ ಕೇಂದ್ರ ಸಚಿವ

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.