ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಕಷ್ಟ
Team Udayavani, Aug 8, 2017, 6:45 AM IST
ಕೊಚ್ಚಿ: ಕಾಂಗ್ರೆಸ್ ಪಕ್ಷ ಇದೇ ಮೊದಲ ಬಾರಿ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಪಕ್ಷದ ಹಿರಿಯ ಮುಖಂಡ ಜೈರಾಮ್ ರಮೇಶ್ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಮೂಲಕ ಎದುರಾಗಿರುವ ಈ ಸಂಕಷ್ಟ ಸ್ಥಿತಿಯಿಂದ ಪಕ್ಷ ಹೊರಬರಲು ಮುಖಂಡರ “ಸಂಘಟಿತ ಶ್ರಮ’ ಅತ್ಯಗತ್ಯ ಎಂದಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ನಡೆದ ಪಂಚರಾಜ್ಯಗಳ ಚುನಾವಣೆ ಸೇರಿದಂತೆ ದೇಶಾದ್ಯಂತ ನಡೆಯುತ್ತಿರುವ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಸಾಲುಸಾಲಾಗಿ ಮುಖಭಂಗ ಅನುಭವಿಸುತ್ತಿದೆ. ಅಲ್ಲದೆ ಪಕ್ಷ ರಾಜಕೀಯವಾಗಿ ಭಾರೀ ಹಿನ್ನಡೆ ಅನುಭವಿಸಿರುವ ಈ ಸಂದರ್ಭದಲ್ಲಿ ಜೈರಾಮ್ ರಮೇಶ್ ಅವರ ಈ ಹೇಳಿಕೆಗೆ ಹೆಚ್ಚು ಮಹತ್ವ ಬಂದಿದೆ. “1996ರಿಂದ 2004ರ ನಡುವೆ ತೀವ್ರ ಸ್ವರೂಪದ “ರಾಜಕೀಯ ಬಿಕ್ಕಟ್ಟು’ ಎದುರಿಸಿದ್ದ ಪಕ್ಷ ಅಧಿಕಾರದಿಂದ ದೂರ ಉಳಿದಿತ್ತು. ತುರ್ತು ಪರಿಸ್ಥಿತಿ ನಂತರ, 1977ರಲ್ಲಿ ಪಕ್ಷ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದಾಗಲೂ ಇದೇ ಪರಿಸ್ಥಿತಿಯಿತ್ತು. ಆದರೆ ಪಕ್ಷದ ಅಸ್ತಿತ್ವಕ್ಕೇ ಕುತ್ತು ಬಂದೊದಗಿರುವುದು ಇದೇ ಮೊದಲು,’ ಎಂದು ರಮೇಶ್ ಕಳವಳ ವ್ಯಕ್ತಪಡಿಸಿದ್ದಾರೆ.
ಗುಜರಾತ್‌ನ ಶಾಸಕರನ್ನು ಕರ್ನಾಟಕದ ರೆಸಾರ್ಟ್‌ಗೆ ಕಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಜೈರಾಮ್, “ಬಿಜೆಪಿಯವರು ಹಣದ ಆಮಿಷ ತೋರಿ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯುತ್ತಾರೆ ಎಂಬ ಅನುಮಾನದಿಂದಲೇ 44 ಶಾಸಕರನ್ನು ಕರ್ನಾಟಕದ ರೆಸಾರ್ಟ್‌ಗೆ ಕಳಿಸಲಾಗಿತ್ತು. ಬಿಜೆಪಿ ಕೂಡ ಹಿಂದೆ ತನ್ನ ಶಾಸಕರನ್ನು ರೆಸಾರ್ಟ್ ಪ್ರವಾಸಕ್ಕೆ ಕಳಿಸಿದ್ದಿದೆ,’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್