Congress; ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ನೇಮಕ
Team Udayavani, Jul 14, 2024, 1:02 PM IST
ಹೊಸದಿಲ್ಲಿ: ಲೋಕಸಭೆಯ ಉಪ ನಾಯಕರನ್ನಾಗಿ ಕಾಂಗ್ರೆಸ್ ಪಕ್ಷವು ಇಂದು ಸಂಸದ ಗೌರವ್ ಗೊಗೊಯ್ ಅವರನ್ನು ನೇಮಿಸಿ ಆದೇಶಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯ ಸ್ಪೀಕರ್ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್‌ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಗೌರವ್ ಗೊಗೊಯ್ ಅವರಲ್ಲದೆ, ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಿರುವ ಬಗ್ಗೆ ಸೋನಿಯಾ ಗಾಂಧಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸಂಸದರಾದ ಮಾಣಿಕ್ಕಂ ಟ್ಯಾಗೋರ್ ಮತ್ತು ಡಾ ಎಂಡಿ ಜವೈದ್ ಅವರನ್ನು ವಿಪ್ ಗಳಾಗಿ ನೇಮಿಸಲಾಗಿದೆ.
Hon’ble CPP Chairperson Smt. Sonia Gandhi ji has written to the Hon’ble Lok Sabha Speaker informing him about the appointment of the Deputy Leader, Chief Whip, and two Whips for the Congress Party in the Lok Sabha.
Deputy Leader – Shri @GauravGogoiAsm
Chief Whip – Shri…
— K C Venugopal (@kcvenugopalmp) July 14, 2024
ಲೋಕಸಭೆಯಲ್ಲಿ ಪ್ರತಿಪಕ್ಷಗಳ ಜತೆಗೂಡಿ ಕಾಂಗ್ರೆಸ್ ಜನಪರ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.