Congress guarantees; ಕರ್ನಾಟಕಕ್ಕೆ ಬಂದು ಯಶಸ್ಸು ನೋಡಿ: ಮಹಾ ಬಿಜೆಪಿಗೆ ಡಿಕೆಶಿ ಚಾಟಿ
Team Udayavani, Nov 10, 2024, 6:59 AM IST
ಮುಂಬಯಿ: ಕಾಂಗ್ರೆಸ್ ಸರಕಾರಗಳು “ಗ್ಯಾರಂಟಿ’ಗಳ ಹೆಸರಲ್ಲಿ ಜನರಿಗೆ ಮೋಸ ಮಾಡುತ್ತಿದ್ದು, ಜನರಿಗೆ ಕೊಟ್ಟ ಯಾವ ಆಶ್ವಾಸನೆಯನ್ನೂ ಈಡೇರಿಸಿಲ್ಲ ಎಂದು ಪ್ರಧಾನಿ ಮೋದಿ ಆದಿಯಾಗಿ ಬಿಜೆಪಿ ನಾಯಕರು ಆರೋಪಿಸಿದ ಬೆನ್ನಲ್ಲೇ ಶನಿವಾರ ಬಿಜೆಪಿ ವಿರುದ್ಧ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂ, ಡಿಸಿಎಂಗಳು ಮುಗಿಬಿದ್ದಿದ್ದಾರೆ. ಬಿಜೆಪಿಯ ಆರೋಪಗಳಿಗೆ ತಿರುಗೇಟು ನೀಡಿರುವ ಅವರು, ತಮ್ಮ ರಾಜ್ಯಗಳಿಗೆ ಬಂದು ಗ್ಯಾರಂಟಿ ಅನುಷ್ಠಾನಗೊಂರುವುದನ್ನು ಕಣ್ಣಾರೆ ನೋಡಿ ಎಂದು ಸವಾಲು ಹಾಕಿದ್ದಾರೆ.
ನ. 20ರಂದು ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರದ ಮುಂಬಯಿಯಲ್ಲಿ ಶನಿವಾರ ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹಾಗೂ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಮಹಾಯುತಿ ನಾಯಕರು ಕರ್ನಾಟಕಕ್ಕೆ ಒಮ್ಮೆ ಬಂದು ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬಗ್ಗೆ ಜನರಿಂದಲೇ ಮಾಹಿತಿ ಪಡೆಯಲಿ. ಅವರ ಭೇಟಿಗೆ ಕೆಪಿಸಿಸಿ ವತಿಯಿಂದಲೇ ವಿಶೇಷ ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುತ್ತೇನೆ.
ಮಹಾರಾಷ್ಟ್ರದ ಮಹಾಯುತಿ (ಬಿಜೆಪಿ ಮತ್ತು ಮಿತ್ರಪಕ್ಷಗಳು) ನಾಯಕರು ನಮ್ಮ ರಾಜ್ಯಕ್ಕೆ ಬಂದು, ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬಗ್ಗೆ ಖುದ್ದು ಜನರಿಂದಲೇ ಮಾಹಿತಿ ಪಡೆಯಲಿ. ಅವರ ಭೇಟಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಶೇಷ ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುತ್ತೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು ಹಾಕಿದ್ದಾರೆ.
ಬಿಜೆಪಿಯು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವಿಚಾರವಾಗಿ ಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿತ್ತು. ಈ ಸುಳ್ಳನ್ನು ಬಯಲು ಮಾಡಲು ನಾವು ಮಹಾರಾಷ್ಟ್ರಕ್ಕೆ ಬಂದಿದ್ದೇವೆ. ಯಾವುದೇ ಸಮಯದಲ್ಲಿ ಮಹಾಯುತಿ ನಾಯಕರು ರಾಜ್ಯಕ್ಕೆ ಭೇಟಿ ನೀಡಬಹುದು ಎಂದಿದ್ದಾರೆ. ಗ್ಯಾರಂಟಿ ಯೋಜನೆಗಳು ಜಾರಿಗೆ ಮುನ್ನ ಕರ್ನಾಟಕದ ಜಿಡಿಪಿ ಶೇ. 8.2ರಷ್ಟಿತ್ತು. ಈಗ ಶೇ. 10.2ರಷ್ಟಿದೆ. ಇದು ನನ್ನ ಲೆಕ್ಕಾಚಾರವಲ್ಲ, ಭಾರತ ಸರಕಾರದ ವಿವಿಧ ಸಂಸ್ಥೆಗಳ ಲೆಕ್ಕಾಚಾರ ಎಂದಿದ್ದಾರೆ.
ಗ್ಯಾರಂಟಿ ವಿಚಾರವಾಗಿ ಸುಳ್ಳು ಹಬ್ಬಿಸಿದ ಪಕ್ಷಗಳ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುವ ಕುರಿತು ನಾವು ಯೋಚನೆ ಮಾಡುತ್ತಿದ್ದೇವೆ ಎಂದೂ ಡಿಕೆಶಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರಿಂದ ತೊಡಗಿ ಬಿಜೆಪಿಯ ಎಲ್ಲ ನಾಯಕರು ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡುತ್ತಿದ್ದರು. ಆದರೆ ಈಗ ಅವರೇ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಭರವಸೆ ಕೊಟ್ಟಿ¨ªಾರೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಹೆಮ್ಮೆ ಎಂದಿದ್ದಾರೆ.
50 ಸಾವಿರ ಉದ್ಯೋಗ ಸೃಷ್ಟಿ
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಾತನಾಡಿ, ನಾವು ಗ್ಯಾರಂಟಿ ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿ ಮಾಡುತ್ತ ಬರುತ್ತಿದ್ದೇವೆ. ತೆಲಂಗಾಣದಲ್ಲಿ ನಾವು ಅಧಿಕಾರಕ್ಕೆ ಬಂದೊಡನೆ 22.22 ಲಕ್ಷ ರೈತರ 17,869 ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದೇವೆ. 10 ತಿಂಗಳುಗಳಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಿದ್ದೇವೆ. 200 ಯೂನಿಟ್‌ವರೆಗಿನ ಉಚಿತ ವಿದ್ಯುತ್ ಯೋಜನೆಯಿಂದ 50 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಗೆ ಇಂಥ ಯಾವ ಯಶೋಗಾಥೆಯೂ ಇಲ್ಲ ಎಂದು ಕಿಡಿಕಾರಿದರು.
ಹಳೆ ಪಿಂಚಣಿ ಯೋಜನೆ ಜಾರಿ
ಹಿಮಾಚಲ ಪ್ರದೇಶ ಸಿಎಂ ಸುಖು ಅವರು ತಮ್ಮ ಸರಕಾರದ ಯೋಜನೆಗಳ ಬಗ್ಗೆ ಮಾತನಾಡಿ, ಹಳೆಯ ಪಿಂಚಣಿ ಜಾರಿ ಮಾಡುವ ನಮ್ಮ ನಿರ್ಧಾರದಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಹೊಸ ಪಿಂಚಣಿ ಯೋಜನೆಯಿಂದ ಮಾಸಿಕ 5 ಸಾವಿರ ರೂ. ಪಡೆಯುತ್ತಿದ್ದವರು ಈಗ ಹಳೆಯ ಪಿಂಚಣಿ ಯೋಜನೆಯನ್ವಯ 50 ಸಾವಿರ ರೂ. ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಒಟ್ಟಾಗಿದ್ದರೆ ನಾವು ಸುರಕ್ಷಿತ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಸಂಸ್ಕೃತಿಯೇ ಒಟ್ಟಾಗಿರುವುದು. ಆದರೆ ಇಂಥ ಹೇಳಿಕೆ ನೀಡುವವರು ದೇಶವನ್ನು ಒಟ್ಟಾಗಿಡಲು ಬಿಡುವುದಿಲ್ಲ ಎಂದಿದ್ದಾರೆ.
-ಡಿ.ಕೆ. ಶಿವಕುಮಾರ್, ಕರ್ನಾಟಕ ಡಿಸಿಎಂ
ತೆಲಂಗಾಣದಲ್ಲಿ ನಾವು ರೈತರ 17,869 ಕೋಟಿ ರೂ. ಸಾಲ ಮನ್ನಾ ಮಾಡಿದ್ದೇವೆ. 10 ತಿಂಗಳಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಿದ್ದೇವೆ. ಉಚಿತ ವಿದ್ಯುತ್ ಯೋಜನೆಯಿಂದ 50 ಲಕ್ಷ ಕುಟುಂಬಗಳಿಗೆ ಅನುಕೂಲಆಗಿದೆ. ಬಿಜೆಪಿಗೆ ಇಂಥ ಯಾವ ಯಶೋಗಾಥೆಯೂ ಇಲ್ಲ.
-ರೇವಂತ್ ರೆಡ್ಡಿ, ತೆಲಂಗಾಣ ಸಿಎಂ
ನಮ್ಮ ಸರಕಾರ ಹಳೆ ಪಿಂಚಣಿ ಯೋಜನೆ ಮರುಜಾರಿ ಮಾಡಿದೆ. ಹೊಸ ಪಿಂಚಣಿ ಯೋಜನೆಯಿಂದ ಮಾಸಿಕ 5 ಸಾವಿರ ರೂ. ಪಡೆಯುತ್ತಿದ್ದವರು ಈಗ ಹಳೆಯ ಪಿಂಚಣಿ ಯೋಜನೆಯನ್ವಯ 50 ಸಾವಿರ ರೂ. ಪಡೆಯುತ್ತಿದ್ದಾರೆ.
-ಸುಖ್ವಿಂದರ್ ಸಿಂಗ್ ಸುಖು, ಹಿಮಾಚಲ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.