ಕಾಂಗ್ರೆಸ್‌ನಲ್ಲಿ ಮುಸ್ಲಿಂ ರಕ್ತದ ಕಲೆ
Team Udayavani, Apr 25, 2018, 5:10 AM IST
ಅಲೀಗಢ: ‘ಕಾಂಗ್ರೆಸ್ ನ ಹಸ್ತದಲ್ಲಿ ಮುಸ್ಲಿಮರ ರಕ್ತದ ಕಲೆಯಿರುವುದು ನಿಜ’. ಹೀಗೆಂದು ಹೇಳಿರುವುದು ಬೇರೆ ಯಾರೂ ಅಲ್ಲ. ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಸಲ್ಮಾನ್ ಖುರ್ಷೀದ್. ಅಲೀಗಢ ಮುಸ್ಲಿಂ ವಿವಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ನೀಡಿರುವ ಈ ಹೇಳಿಕೆ ಕಾಂಗ್ರೆಸ್ ಗೆ ತೀವ್ರ ಮುಜುಗರ ಉಂಟುಮಾಡಿದೆ. ಕಾಂಗ್ರೆಸ್ ನ ಕೈಗೆ ಮುಸ್ಲಿಮರ ರಕ್ತದ ಕಲೆ ಅಂಟಿಕೊಂಡಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ನಾನು ಕೂಡ ಕಾಂಗ್ರೆಸ್ಸಿಗ. ಆ ರಕ್ತದ ಕಲೆಯನ್ನು ತೋರಿಸಲೂ ನಾನು ಸಿದ್ಧ ಎಂದಿದ್ದಾರೆ ಖುರ್ಷೀದ್.
ಸಂವಾದದ ವೇಳೆ, “ಕೇಂದ್ರದಲ್ಲಿ ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ಹಸನ್‌ಪುರ, ಮಲಿಯಾನಾ, ಮುಜಫರ್ ನಗರ, ಇತರ ಹಲವಾರು ಕಡೆ ಕೋಮು ಸಂಘರ್ಷಗಳಾಗಿವೆ. ಹಾಗಾಗಿ ಆ ಗಲಭೆಗಳಲ್ಲಿ ಪ್ರಾಣ ತೆತ್ತ ಮುಸ್ಲಿಮರ ರಕ್ತ, ಕಾಂಗ್ರೆಸ್ಸಿಗೆ ಅಂಟಿಕೊಂಡಿಲ್ಲವೇ?’ ಎಂಬ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉತ್ತರಿಸುವ ವೇಳೆ ಖುರ್ಷೀದ್ ಈ ಹೇಳಿಕೆ ನೀಡಿದ್ದಾರೆ.
‘ಇದೊಂದು ರಾಜಕೀಯ ಪ್ರಶ್ನೆ. ಕಾಂಗ್ರೆಸ್ ಕೈಗೆ ಅಂಟಿಕೊಂಡಿರುವ ರಕ್ತದ ಕಲೆಗಳನ್ನು ನಾನು ತೋರಿಸಬಲ್ಲೆ. ಇದರಿಂದ, ನಿಮ್ಮ ಎದುರಾಳಿಗಳ ಮೇಲೆ ನೀವು ಹಲ್ಲೆ ಮಾಡಿದರೆ ನಿಮ್ಮ ಕೈಗೂ ರಕ್ತದ ಕಲೆ ಅಂಟಿಕೊಳ್ಳುತ್ತದೆ ಎಂಬ ಸತ್ಯವನ್ನು ನೀವು ಅರ್ಥಮಾಡಿಕೊಳ್ಳಬೇಕು. ನಿಮ್ಮ ಕೈಗೆ ರಕ್ತ ಅಂಟಿಕೊಳ್ಳದಂತೆ ನೋಡಿಕೊಳ್ಳಬೇಕು’ ಎಂದು ಉತ್ತರಿಸಿದ್ದಾರೆ. ಖುರ್ಷೀದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು ಪಕ್ಷದ್ದಲ್ಲ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.