‘ಉಪ್ಪು ತುಂಬಿದ ಕೈಗಳು ಒಂದು ಸಾಮ್ರಾಜ್ಯವನ್ನೇ ಅಲುಗಾಡಿಸಿದಾಗ’
Team Udayavani, Mar 12, 2019, 5:59 AM IST
ನವದೆಹಲಿ: ಈ ದೇಶದ ಪ್ರಮುಖ ಪ್ರತಿಪಕ್ಷವೆಂದೆಣಿಸಿಕೊಂಡಿರುವ ಕಾಂಗ್ರೆಸ್ ಮಹಾತ್ಮ ಗಾಂಧಿ ಅವರ ಆದರ್ಶಗಳನ್ನು ಮರೆತುಬಿಟ್ಟಿದೆ ಮಾತ್ರವಲ್ಲದೇ ಕಾಂಗ್ರೆಸ್ ಈ ದೇಶವನ್ನು ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಭಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬ್ಲಾಗ್ ಬರಹದಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬ್ರಿಟೀಶ್ ಆಡಳಿತ ದೇಶದಲ್ಲಿ ಉಪ್ಪಿನ ಮೇಲೆ ಹೇರಿದ್ದ ಕರವನ್ನು ವಿರೋಧಿಸಿ ಮಹಾತ್ಮಾ ಗಾಂಧೀಜಿಯವರು ಕೈಗೊಂಡಿದ್ದ ‘ದಂಡಿ’ ಯಾತ್ರೆಗೆ 89 ವರ್ಷಗಳು ಸಂದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಬೊಗಸೆ ತುಂಬಾ ಉಪ್ಪು ತುಂಬಿದ ಕೈಗಳು ಸಾಮ್ರಾಜ್ಯವೊಂದನ್ನು ಅಲುಗಾಡಿಸಿದಾಗ’ ಎಂಬ ವಿಶಿಷ್ಟ ಶೀರ್ಷಿಕೆ ಇರುವ ಬ್ಲಾಗ್ ಬರಹವೊಂದನ್ನು ಬರೆದಿದ್ದು ಅದರಲ್ಲಿ ಪ್ರಧಾನಿ ಮೋದಿ ಅವರು ‘ಕೈ’ ಪಕ್ಷದ ವಿರುದ್ಧ ಈ ರೀತಿಯ ಗಂಭೀರ ಆರೋಪವನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧೀಜಿಯವರು ಅಂದು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಸಂಘಟಿತವಾಗಿ ಕೈಗೊಂಡ ದಂಡಿ ಯಾತ್ರೆಯಿಂದ ಯಾವ ರೀತಿ ಒಂದು ಸಾಮ್ರಾಜ್ಯವೇ ನಡುಕವನ್ನನುಭವಿಸಿತು ಎಂಬ ಅರ್ಥಬರುವಂತೆ ತಮ್ಮ ಬ್ಲಾಗ್ ಗೆ ಈ ಶೀರ್ಷಿಕೆಯನ್ನು ಇರಿಸಿದ್ದಾರೆ.
‘ಗಾಂಧೀಜಿ ಅವರು ತಮ್ಮ ಪ್ರತೀ ಕಾರ್ಯಗಳನ್ನೂ ಜಾತಿ, ಧರ್ಮ ರಹಿತವಾಗಿ ಮಾಡಿದರು. ಆದರೆ ಅವರದೇ ತತ್ವಾದರ್ಶಗಳನ್ನು ಪಾಲಿಸುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷವು ಈ ದೇಶದ ಜನರನ್ನು ಜಾತಿ-ಧರ್ಮದ ಆಧಾರದಲ್ಲಿ ಒಡೆಯುವಲ್ಲಿ ಯಾವತ್ತೂ ಹಿಂಜರಿಯಲಿಲ್ಲ. ಇನ್ನು ಕಾಂಗ್ರೆಸ್ ಆಡಳಿತ ಕಾಲದಲ್ಲಿ ಗಂಭೀರ ಸ್ವರೂಪದ ದಲಿತರ ಹತ್ಯಾಕಾಂಡಗಳು ಮತ್ತು ಕೋಮುಗಲಭೆಗಳು ಸಂಭವಿಸಿದ ಉದಾಹರಣೆಗಳು ನಮ್ಮ ಕಣ್ಣಮುಂದಿವೆ’ ಎಂದು ಅವರು ಈ ಬರಹದಲ್ಲಿ ನಮೂದಿಸಿದ್ದಾರೆ. ಮತ್ತು ಈ ಮೂಲಕ ಗಾಂಧಿ ಸಂಸ್ಕೃತಿಗೆ ವ್ಯತಿರಿಕ್ತವಾಗಿ ಹೇಗೆ ಕಾಂಗ್ರೆಸ್ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪ್ರಧಾನಿ ಮೋದಿ ಅವರು ಒಂದೊಂದೇ ಅಂಶಗಳ ಮೂಲಕ ವಿವರಿಸಿದ್ದಾರೆ.
Tributes to Bapu and all those who marched with him to Dandi in pursuit of justice and equality.
Sharing a few thoughts on the Dandi March, the ideals of Bapu and his disdain for the Congress culture in my blog.https://t.co/QVuDNCZoXL
— Narendra Modi (@narendramodi) March 12, 2019
ಕಾಂಗ್ರೆಸ್ ಸಂಸ್ಕೃತಿಯ ಕುರಿತಾಗಿ ಅಂದೇ ಅರಿತುಕೊಂಡಿದ್ದ ಗಾಂಧೀಜಿಯವರು 1947ರಲ್ಲೇ ಸ್ವಾತಂತ್ರ್ಯಾನಂತರ ಕಾಂಗ್ರೆಸ್ ಅನ್ನು ವಿಸರ್ಜಿಸುವಂತೆ ಹೇಳಿದ್ದರು, ಈ ಪಕ್ಷವು ಮುಂಬರುವ ದಿನಗಳಲ್ಲಿ ದೇಶದಲ್ಲಿ ಅರಾಜಕತೆಯನ್ನು ಉಂಟುಮಾಡಬಹುದು ಎಂಬ ಕಲ್ಪನೆಯು ಗಾಂಧೀಜಿಯವರಿಗೆ ಆಗಲೇ ಮನವರಿಕೆಯಾಗಿತ್ತು ಎಂದು ಪ್ರಧಾನಿ ಅವರು ತಮ್ಮ ಬರಹದಲ್ಲಿ ಪ್ರತಿಪಾದಿಸಿಕೊಂಡಿದ್ದಾರೆ.
ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಗಂಭಿರ ಆರೋಪ ಮಾಡಿರುವ ಪ್ರಧಾನಿ ಮೋದಿ ಅವರು ಈ ದೇಶದಲ್ಲಿ ನಡೆದಿರುವ ಪ್ರಮುಖ ಹಗರಣಗಳಲ್ಲೆಲ್ಲಾ ಕಾಂಗ್ರೆಸ್ ಪಕ್ಷವು ಭಾಗಿಯಾಗಿದೆ ಎಂದು ಕುಟುಕಿದ್ದಾರೆ. ಇನ್ನು ಮಹಾತ್ಮಾ ಗಾಂಧೀಜಿಯವರು ವಂಶಪಾರಂಪರ್ಯ ಆಡಳಿತಕ್ಕೆ ವಿರುದ್ಧವಾಗಿದ್ದರು. ಆದರೆ ಈ ಕಾಂಗ್ರೆಸ್ ಪಕ್ಷವು ಅಂದಿನಿಂದ ಇವತ್ತಿನವರೆಗೂ ವಂಶಪಾರಂಪರ್ಯ ಆಡಳಿತಕ್ಕೇ ನೆಚ್ಚಿಕೊಂಡಿದೆ ಮತ್ತು ಅದರ ಹೊರತಾದ ಕಲ್ಪನೆಯನ್ನೂ ಸಹ ಆ ಪಕ್ಷದಲ್ಲಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ದುರ್ಬಲರಿಗೆ ಮತ್ತು ಪ್ರಬಲರಿಗೆ ಸಮಾನ ಅವಕಾಶವನ್ನು ನೀಡುವುದೇ ಪ್ರಜಾಪ್ರಭುತ್ವದ ವಿಶೇಷ ಲಕ್ಷಣ ಎಂದು ಬಾಪೂ ಅವರ ಅಭಿಪ್ರಾಯವಾಗಿತ್ತು ಆದರೆ 1975ರಲ್ಲಿ ದೇಶದಲ್ಲಿ ತುರ್ತುಪರಿಸ್ಥಿತಿಯನ್ನು ಹೇರುವ ಮೂಲಕ ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವದ ಆಶಯಗಳನ್ನೇ ಬಲಿಕೊಟ್ಟಿತ್ತು ಎಂಬ ಗಂಭೀರ ಟೀಕೆಯನ್ನು ಅವರು ತಮ್ಮ ಬ್ಲಾಗ್ ನಲ್ಲಿ ಮಾಡಿದ್ದಾರೆ.
ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷವು ಸಂವಿಧಾನದ 356ನೇ ವಿಧಿಯನ್ನು ಹಲವಾರು ಬಾರಿ ತನಗೆ ಬೇಕಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ದುರುಪಯೋಗ ಮಾಡಿಕೊಂಡಿದೆ, ಇವೆಲ್ಲವೂ ಮಹಾತ್ಮಾ ಗಾಂಧೀಜಿಯವರು ಪ್ರತಿಪಾದಿಸಿದ್ದ ತತ್ವಗಳಿಗೆ ವಿರುದ್ಧವಾಗಿತ್ತು ಎಂದು ಬರೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷದ ನಿಜ ಬಣ್ಣವನ್ನು ಬಯಲು ಮಾಡುವ ಪ್ರಯತ್ನವನ್ನು ಪ್ರಧಾನಿಯವರು ತಮ್ಮ ಈ ಬ್ಲಾಗ್ ಲೇಖನದಲ್ಲಿ ಮಾಡಿದ್ದಾರೆ. ತಮ್ಮ ಈ ಬ್ಲಾಗ್ ನ ಲಿಂಕ್ ಅನ್ನು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಅಕೌಂಟ್ ನಲ್ಲೂ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.