ಏ.30ರವರೆಗೂ ಹೋರಾಟ; ರಾಹುಲ್ ಅನರ್ಹತೆಯೇ ಈಗ ಕಾಂಗ್ರೆಸ್‌ಗೆ “ಅಸ್ತ್ರ’
ಒಂದು ತಿಂಗಳ ಕಾಲ ಹೋರಾಟಕ್ಕೆ ಕಾರ್ಯತಂತ್ರ
Team Udayavani, Mar 29, 2023, 7:20 AM IST
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾನಹಾನಿ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿರುವ ಈ ಹೊತ್ತಲ್ಲಿ, ದೇಶಾದ್ಯಂತ ಎದ್ದಿರುವ “ಅನುಕಂಪದ ಅಲೆ’ಯ ಲಾಭ ಪಡೆಯಲು ಕಾಂಗ್ರೆಸ್ ಮುಂದಾಗಿದೆ. ಅದರಂತೆ, ಏಪ್ರಿಲ್ ಅಂತ್ಯದವರೆಗೂ ಅಂದರೆ ಒಂದಿಡೀ ತಿಂಗಳು ಹೋರಾಟದ ಬಿಸಿ ತಣ್ಣಗಾಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ.
ಒಂದು ತಿಂಗಳ ಕಾಲ ನಡೆಯುವ ಹೋರಾಟ, ಪ್ರತಿಭಟನೆಯ ರೂಪುರೇಷೆಗಳನ್ನು ಚರ್ಚಿಸಿ, ಮಂಗಳವಾರ ಈ ಕುರಿತ ಸುತ್ತೋಲೆಯನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ಅದರಲ್ಲಿ ಇಡೀ ತಿಂಗಳಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದಲ್ಲಿ ಹೇಗೆ ಹೋರಾಟಗಳನ್ನು ನಡೆಸಬೇಕು ಎಂಬ ವಿವರಣೆಯನ್ನೂ ನೀಡಲಾಗಿದೆ.
ಪಂಜಿನ ಮೆರವಣಿಗೆ:
ಈ ಕಾರ್ಯತಂತ್ರದ ಭಾಗವಾಗಿ, ಮಂಗಳವಾರ ರಾತ್ರಿ 7 ಗಂಟೆಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೆಹಲಿಯ ಕೆಂಪುಕೋಟೆಯಿಂದ ಟೌನ್‌ಹಾಲ್‌ವರೆಗೆ ಪಂಜಿನ ಮೆರವಣಿಗೆ ನಡೆಸಿದ್ದಾರೆ. ಬುಧವಾರ ದೇಶದ 35 ಪ್ರಮುಖ ನಗರಗಳಲ್ಲಿ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಜತೆಗೆ, ಪಕ್ಷದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಘಟಕಗಳು ಜಿಲ್ಲಾ ಪ್ರಧಾನ ಕಚೇರಿಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ರಾಹುಲ್ ಅನರ್ಹತೆ ಖಂಡಿಸಿ ಮಾ.29ರಿಂದ ಏ.8ರವರೆಗೆ ಬ್ಲಾಕ್, ಮಂಡಲ ಮಟ್ಟದಲ್ಲಿ “ಜೈ ಭಾರತ್ ಸತ್ಯಾಗ್ರಹ’, ಪೋಸ್ಟ್ ಕಾರ್ಡ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕೊನೆಗೆ ರಾಷ್ಟ್ರೀಯ ಮಟ್ಟದ ಜೈಭಾರತ್ ಮಹಾ ಸತ್ಯಾಗ್ರಹವನ್ನು ನಡೆಸಲೂ ಕಾಂಗ್ರೆಸ್ ಯೋಜಿಸಿದೆ.
ಬಂಗಲೆ ತೆರವಿಗೆ ಒಪ್ಪಿದ ರಾಹುಲ್:
ಸರ್ಕಾರಿ ಬಂಗಲೆ ತೆರವುಗೊಳಿಸುವಂತೆ ಲೋಕಸಭಾ ಕಾರ್ಯಾಲಯ ಕಳುಹಿಸಿದ್ದ ನೋಟಿಸ್‌ಗೆ ಮಂಗಳವಾರ ಉತ್ತರಿಸಿರುವ ರಾಹುಲ್, “ಈ ಸೂಚನೆಯನ್ನು ನಾನು ಶಿರಸಾವಹಿಸಿ ಪಾಲಿಸುತ್ತೇನೆ’ ಎಂದಿದ್ದಾರೆ. “ಕಳೆದ 4 ಅವಧಿಯಿಂದಲೂ ಸಂಸತ್ ಸದಸ್ಯನಾಗಿ ಈ ಬಂಗಲೆಯಲ್ಲಿ ನಾನಿದ್ದೇನೆ. ಇಲ್ಲಿ ನಾನು ಕಳೆದಿರುವ ಪ್ರತಿಯೊಂದು ಖುಷಿಯ ಕ್ಷಣವೂ ಸ್ಮರಣೀಯವಾದದ್ದು’ ಎಂದೂ ಬರೆದಿದ್ದಾರೆ.
ಇದೇ ವೇಳೆ, ಮಂಗಳವಾರ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ರಾಹುಲ್ ಗಾಂಧಿ ಅವರಿಗೆ ಬೆದರಿಕೆಯೊಡ್ಡುವ, ಹೆದರಿಸುವ ಮತ್ತು ಅವಮಾನಿಸುವ ಸರ್ಕಾರದ ವರ್ತನೆಯನ್ನು ನಾವು ಖಂಡಿಸುತ್ತೇವೆ’ ಎಂದಿದ್ದಾರೆ. ಬಂಗಲೆ ಖಾಲಿ ಮಾಡಿಸುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, “ಇದು ಸಣ್ಣತನದ ಮನುಷ್ಯನ ಸಣ್ಣತನದ ರಾಜಕೀಯ’ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು, ರಾಹುಲ್ ಅನರ್ಹತೆಯು ಪ್ರಜಾಸತ್ತೆಯ ಮೇಲಿನ ದಾಳಿ ಎಂದು ಕರೆದಿರುವ ದೇಶದ ಸಾವಿರಕ್ಕೂ ಅಧಿಕ ಕಲಾವಿದರು, ಹೋರಾಟಗಾರರು, ಶೈಕ್ಷಣಿಕ ತಜ್ಞರು, ವಿಜ್ಞಾನಿಗಳು ಹಾಗೂ ನಾಗರಿಕ ಸಮಾಜದ ಸದಸ್ಯರು, “ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಕ್ಕಾಗಿ ಉದ್ದೇಶಪೂರ್ವಕವಾಗಿ ರಾಹುಲ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಆರೋಪಿಸಿ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.
ಜನ ಮೋದಿ ಜತೆಗಿದ್ದಾರೆ: ಸ್ಮತಿ
ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯವರ ವರ್ಚಸ್ಸನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ದೇಶದ ಜನ ಮೋದಿ ಅವರ ಜತೆಗಿದ್ದಾರೆ. ಹೀಗಾಗಿ, ರಾಹುಲ್ ಅವರ ಯತ್ನ ಸಫಲವಾಗದು ಎಂದು ಕೇಂದ್ರ ಸಚಿವೆ ಸ್ಮತಿ ಇರಾನಿ ಹೇಳಿದ್ದಾರೆ. ಒಬಿಸಿ ಸಮುದಾಯಕ್ಕೆ ಅವಮಾನ ಮಾಡಿರುವ ರಾಹುಲ್ ಇನ್ನೂ ಕ್ಷಮೆ ಕೇಳಿಲ್ಲ. ಈ ಮೂಲಕ ಗಾಂಧಿ ಕುಟುಂಬ ತನ್ನ ರಾಜಕೀಯ ಅಹಂಕಾರವನ್ನು ಪ್ರದರ್ಶಿಸಿದೆ ಎಂದೂ ಆರೋಪಿಸಿದ್ದಾರೆ. ಈ ನಡುವೆ ಮಾತನಾಡಿರುವ ಬಿಜೆಪಿ ಸಂಸದ ಸಂಜಯ್ ಜೈಸ್ವಾಲ್, “ವಿದೇಶಿ ಮಹಿಳೆಗೆ ಹುಟ್ಟಿದ ವ್ಯಕ್ತಿ ಎಂದೂ ದೇಶಭಕ್ತನಾಗಲು ಸಾಧ್ಯವಿಲ್ಲ’ ಎಂಬ ವಿವಾದಿತ ಹೇಳಿಕೆ ನೀಡಿದ್ದಾರೆ.
ಬಿಜೆಪಿಯಿಂದಲೂ ಪ್ರತಿಭಟನೆ ತೀವ್ರ
ಕಾಂಗ್ರೆಸ್ ಹೋರಾಟಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಪ್ರತಿಭಟನೆಯ ಹಾದಿ ಹಿಡಿದಿದೆ. ರಾಹುಲ್ ಒಬಿಸಿ ಸಮುದಾಯಕ್ಕೆ ಅವಮಾನ ಮಾಡಿದ್ದು, ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದೆ. ಬಿಜೆಪಿಯ ಒಬಿಸಿ ಸಂಸದರು ಮಂಗಳವಾರ ಸಂಸತ್ ಭವನದಿಂದ ವಿಜಯ್ ಚೌಕ್‌ವರೆಗೆ ಪಾದಯಾತ್ರೆ ನಡೆಸಿದ್ದು, ರಾಹುಲ್ ಕ್ಷಮೆಗೆ ಪಟ್ಟುಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.