ಕೈ ಸಾಮೂಹಿಕ ರಾಜೀನಾಮೆ ಪರ್ವ
Team Udayavani, Jun 29, 2019, 5:30 AM IST
ನವದೆಹಲಿ: ಕಾಂಗ್ರೆಸ್‌ನ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದನ್ನು ಬೆಂಬಲಿಸಿ, ಎಐಸಿಸಿ ಕಾರ್ಯದರ್ಶಿಗಳು, ದೆಹಲಿ, ಮಧ್ಯಪ್ರದೇಶ, ಹರ್ಯಾಣ ರಾಜ್ಯಗಳ 120ಕ್ಕೂ ಹೆಚ್ಚು ಯುವ ಕಾಂಗ್ರೆಸ್ ನಾಯಕರು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ, ಕಾಂಗ್ರೆಸ್‌ನಲ್ಲಿ ಉದ್ಭವಿಸಿರುವ ರಾಜೀನಾಮೆ ಪರ್ವ ಈಗ ಮತ್ತೂಂದು ಮಗ್ಗುಲಿಗೆ ಹೊರಳಿದೆ.
ಶುಕ್ರವಾರ ಬೆಳಗ್ಗೆಯಷ್ಟೇ, ಕಾಂಗ್ರೆಸ್‌ನ ಮಾಹಿತಿ ಹಕ್ಕು ವಿಭಾಗ ಮತ್ತು ಮಾನವ ಹಕ್ಕುಗಳ ವಿಭಾಗಕ್ಕೆ ವಿವೇಕ್ ಟಂಕಾ ಶುಕ್ರವಾರ ರಾಜೀನಾಮೆ ನೀಡಿದ್ದರು. ಇದರ ಬೆನ್ನಿಗೆ ಎಐಸಿಸಿ ಕಾರ್ಯದರ್ಶಿಗಳ, ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರ ಸಾಮೂಹಿಕ ರಾಜಿನಾಮೆ ಸಲ್ಲಿಕೆಯಾಗಿವೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಹುದ್ದೆಗೆ ರಾಹುಲ್ ಗಾಂಧಿ ತ್ಯಾಗಪತ್ರ ನೀಡಿದ್ದು, ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲವೆಂದು ಸ್ಪಷ್ಟಪಡಿಸಿದ ಬೆನ್ನಲ್ಲೇ ಈ ಬೆಳವಣಿಗೆಗಳು ನಡೆದಿವೆ.
ಸಾಧ್ಯತೆ ಇಲ್ಲ: ರಾಹುಲ್ ಗಾಂಧಿ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಶೇ.1ರಷ್ಟೂ ಇಲ್ಲ ಎಂದು ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ‘ಪಿಟಿಐ’ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು ‘ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಶೀಘ್ರದಲ್ಲಿಯೇ ಸಭೆ ಸೇರಲಿದೆ. ರಾಹುಲ್ ರಾಜೀನಾಮೆಯನ್ನು ಸಿಡಬ್ಲ್ಯೂಸಿ ಒಪ್ಪಿಕೊಳ್ಳಬೇಕು. ಅದುವರೆಗೆ ಕೇವಲ ವದಂತಿಗಳೇ ಮುಂದುವರಿಯಲಿವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.