ಒಡಿಶಾ ವಿಧಾನಸಭೆ ಸ್ಪೀಕರ್ ಗೆ ಫ್ಲೆಯಿಂಗ್ ಕಿಸ್ ಕೊಟ್ಟ ಕಾಂಗ್ರೆಸ್ ಶಾಸಕ…ಕಾರಣ ಏನು ಗೊತ್ತಾ?
Team Udayavani, Nov 20, 2019, 10:12 AM IST
ಭುವನೇಶ್ವರ್: ತಮ್ಮ ಕ್ಷೇತ್ರದ ಸಮಸ್ಯೆ ಕುರಿತು ಮಾತನಾಡಲು ಅವಕಾಶ ಕೊಟ್ಟಿದ್ದಕ್ಕೆ ಸ್ಪೀಕರ್ ಎಸ್,ಎನ್. ಪತ್ರೋ ಅವರಿಗೆ ಕಾಂಗ್ರೆಸ್ ಶಾಸಕ ತಾರಾ ಪ್ರಸಾದ್ ಭಾಹಿನಪತಿ ಎನ್ನುವವರು ಫ್ಲೆಯಿಂಗ್ ಕಿಸ್ ನೀಡಿರುವ ಘಟನೆ ಒಡಿಶಾ ವಿಧಾನಸಭೆಯಲ್ಲಿ ನಡೆದಿದೆ.
ಜೆಯ್ ಪೋರ ಶಾಸಕ ತಾರಾ ಪ್ರಸಾದ್, ಹೀಗೆ ಫ್ಲೆಯಿಂಗ್ ಕಿಸ್ ಕೊಟ್ಟ ಘಟನೆಯಿಂದ ಸದನ ನಗೆಗಡಲಲ್ಲಿ ಮುಳುಗಿತ್ತು. ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನನಗೆ ಸ್ಪೀಕರ್ ಎಸ್.ಎನ್.ಪತ್ರೋ ಅವರನ್ನು ಅವಮಾನಿಸಬೇಕೆಂಬ ಯಾವುದೇ ಉದ್ದೇಶ ಇರಲಿಲ್ಲ. ಸ್ಪೀಕರ್ ನೀಡಿದ ಅವಕಾಶಕ್ಕಾಗಿ ನಾನು ಅಭಿನಂದಿಸಲು ಈ ಕ್ರಮ ಅನುಸರಿಸಿದ್ದೇನೆ ಎಂದು ತಿಳಿಸಿದ್ದಾರೆ.
ನನಗೆ ಸ್ಪೀಕರ್ ಅವರಿಗೆ ಧನ್ಯವಾದ ಹೇಳಬೇಕಾಗಿದೆ. ನನ್ನ ಹಿಂದುಳಿದ ಕ್ಷೇತ್ರದ ಬಗ್ಗೆ ಮಾತನಾಡಲು ಅವಕಾಶ ಕೊಟ್ಟಿದ್ದಕ್ಕಾಗಿ ನಾನು ಫ್ಲೆಯಿಂಗ್ ಕಿಸ್ ಕೊಟ್ಟಿದ್ದೇನೆ ಎಂದು ಹೇಳಿದರು. 147 ಸದಸ್ಯ ಬಲದ ವಿಧಾನಸಭೆಯಲ್ಲಿ ಮೊದಲು ಪ್ರಶ್ನೆ ಕೇಳಲು ಸ್ಪೀಕರ್ ಅವಕಾಶ ಕೊಟ್ಟಿರುವುದು ಅಭಿನಂದನೀಯ ಕೆಲಸವಾಗಿದೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಾರಾ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.
ಜೆಯ್ ಪೋರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಹೀಗಾಗಿ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಪ್ರಸ್ತಾಪಿಸಿದ್ದರು. ಅಲ್ಲದೇ ತಮ್ಮ ಕ್ಷೇತ್ರದ ಹಲವು ಸಮಸ್ಯೆಗಳ ಬಗ್ಗೆ ಸದನದಲ್ಲಿ ಗಮನಸೆಳೆದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.