Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
Team Udayavani, Jan 16, 2025, 9:34 PM IST
ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ 1991 ನ್ನು ಪ್ರಶ್ನಿಸುವ ಅರ್ಜಿಗಳನ್ನು ವಿರೋಧಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ನಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಸಿದೆ. ”ಜಾತ್ಯತೀತತೆಯ ಸ್ಥಾಪಿತ ತತ್ವಗಳನ್ನು ದುರ್ಬಲಗೊಳಿಸಲು ಪ್ರೇರಿತ ಮತ್ತು ದುರುದ್ದೇಶಪೂರಿತ ಪ್ರಯತ್ನಗಳನ್ನು ನಡೆಸಲಾಗುತ್ತದೆ” ಎಂದು ಹೇಳಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ”ಕಾಯಿದೆ ದೇಶದ ಜಾತ್ಯತೀತ ನೀತಿಯ ಪ್ರತಿಬಿಂಬ ಮತ್ತು ಜನಾದೇಶದ ಉತ್ಪನ್ನ” ಎಂದು ಕಾಂಗ್ರೆಸ್ ಪಕ್ಷವು ಕಾನೂನನ್ನು ಸಮರ್ಥಿಸಿಕೊಂಡಿದೆ.
1947 ಆಗಸ್ಟ್ 15 ರಂದು ಅಸ್ತಿತ್ವದಲ್ಲಿದ್ದ ಧಾರ್ಮಿಕ ರಚನೆಗಳ ಯಥಾಸ್ಥಿತಿಯನ್ನು ಕಾಪಾಡಲು ಪ್ರಯತ್ನಿಸುವ 10 ನೇ ಲೋಕಸಭೆಯ ಅವಧಿಯಲ್ಲಿ ಕಾಂಗ್ರೆಸ್ ಮತ್ತು ಜನತಾ ದಳ ಸರಕಾರ ಭಾರೀ ಬಹುಮತದೊಂದಿಗೆ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಜಾರಿಗೊಳಿಸಲಾಗಿದೆ ಎಂದು ಮನವಿಯಲ್ಲಿ ಒತ್ತಿಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ
Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Saif Ali Khan: ನಟ ಸೈಫ್ ಅಲಿಖಾನ್ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.