ಕಾಂಗ್ರೆಸ್ ಸಂಸದ ಮನೀಶ್ ತಿವಾರಿಗೆ ಕೋವಿಡ್-19 ಸೋಂಕು ದೃಢ
Team Udayavani, Nov 16, 2020, 9:08 PM IST
ನವದೆಹಲಿ : ಮಾಜಿ ಕೇಂದ್ರ ಸಚಿವ,ಕಾಂಗ್ರೆಸ್ ಸಂಸದ ಮನೀಶ್ ತಿವಾರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಈ ಬಗ್ಗೆ ಸ್ವತಃ ಮನೀಶ್ ತಿವಾರಿ ಅವರು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಟ್ವೀಟರ್ ನಲ್ಲಿ ತಮಗೆ ಕೋವಿಡ್ ಪಾಸಿಟಿವ್ ದೃಢವಾಗಿರುವ ಬಗ್ಗೆ ಮಾಹಿತಿ ನೀಡಿರುವ ಅವರು , “ ಇಂದು ಮಧ್ಯಾಹ್ನ ಕೋವಿಡ್ ಪರೀಕ್ಷೆ ಮಾಡಿಸಿದಾಗ ನನಗೆ ಕೋವಿಡ್ ಪಾಸಿಟಿವ್ ತಗಲಿರುವುದು ದೃಢವಾಗಿದೆ. ಕಳೆದ ರಾತ್ರಿ 2 ಗಂಟೆಗೆ ಎದ್ದಾಗ ಸಣ್ಣ ಮಟ್ಟಿನ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಬೆಳಗ್ಗೆ 2 ಪರೀಕ್ಷೆ ಮಾಡಿಸಿದ್ದೇನೆ, ಈ ವೇಳೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಇತರ ಯಾವುದೇ ರೋಗ ಲಕ್ಷಣಗಳಿಲ್ಲ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದ ಎಲ್ಲರೂ ಮುಂಜಾಗ್ರತೆ ವಹಿಸಿ” ಎಂದು ಮನೀಶ್ ತಿವಾರಿ ಟ್ವೀಟ್ ಮಾಡಿದ್ದಾರೆ.
ಮನೀಶ್ ತಿವಾರಿ ಪಂಜಾಬ್ ರಾಜ್ಯದ ಆನಂದ್ ಪುರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಾಂಗ್ರೆಸ್ ರಾಜ್ಯಸಭಾ ಸಂಸದ ನೀರಜ್ ದಂಗಿ ಸೇರಿದಂತೆ ಹಲವು ಮುಖಂಡರು ಮನೀಶ್ ತಿವಾರಿ ಅವರ ಶೀಘ್ರ ಗುಣಮುಖಕ್ಕಾಗಿ ಟ್ವೀಟ್ ಮಾಡಿ ಹಾರೈಸಿದ್ದಾರೆ.
I have tested positive for COVID -19 today afternoon. I got up with mild fever around 2 AM last night. Got myself tested first thing in the morning.Two parallel Tests. No other symptoms so far.All those who have been in contact with me over the past few days are advised caution.
— Manish Tewari (@ManishTewari) November 16, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.