ಕಾಂಗ್ರೇಸ್ ಸಂಸದ ಶಶಿ ತರೂರ್ ಸೇರಿ ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು..!
ರೈತರ ಟ್ರ್ಯಾಕ್ಟರ್ ಪರೇಡ್ ಗೆ ಸಂಬಂಧಿಸಿದಂತೆ ಕಾಂಗ್ರೇಸ್ ಸಂಸದ ಶಶಿ ತರೂರ್ ಹಾಗೂ ಆರು ಮಂದಿ ಹಿರಿಯ ಪತ್ರಕರ್ತರ ವಿರುದ್ಧ ದೂರು ದಾಖಲು
Team Udayavani, Jan 29, 2021, 12:17 PM IST
ನೊಯ್ಡಾ : ಜನವರಿ 26ರ ಗಣರಾಜ್ಯೋತ್ಸವದ ದಿನದಂದು ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ಪರೇಡ್ ಗೆ ಸಂಬಂಧಿಸಿದಂತೆ ಕಾಂಗ್ರೇಸ್ ಸಂಸದ ಶಶಿ ತರೂರ್ ಹಾಗೂ ಆರು ಮಂದಿ ಹಿರಿಯ ಪತ್ರಕರ್ತರ ವಿರುದ್ಧ ದೂರು ದಾಖಲಾಗಿದೆ.
ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್, ಹಿಂಸಾಚಾರಕ್ಕೆ ತಿರುಗಲು ಈ ಏಳು ಮಂದಿ ಸಾಮಾಜಿಕ ಮಾಧ್ಯಮಗಳಲ್ಲಿ, ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮಗಳು ಹಾಗೂ ಪೋಸ್ಟ್ ಗಳು ಕಾರಣವೆಂದು ಸ್ಥಳಿಯರೊಬ್ಬರು ನೀಡಿದ ದೂರಿನ ಅನ್ವಯ ನೊಯ್ಡಾ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
ಓದಿ : ಬಹಿರಂಗಗೊಂಡಿದೆ ರಿಯಲ್ ಮಿ ಎಕ್ಸ್ 7 5ಜಿ ಮತ್ತು ರಿಯಲ್ ಮಿ ಎಕ್ಸ್ 7 ಪ್ರೊ 5ಜಿ ಗಳ ಫೀಚರ್ಸ್
ಹಿರಿಯ ಪತ್ರಕರ್ತರಾದ ಮೃಣಾಲ್ ಪಾಂಡೆ, ರಾಜದೀಪ್ ಸರ್ದೇಸಾಯಿ, ವಿನೋದ್ ಜೋಸ್, ಜಾಫರ್ ಅಘ, ಪರೇಶ್ ನಾಥ್ ಹಾಗೂ ಅನಂತ್ ನಾಥ್ ಅವರನ್ನೊಳಗೊಂಡು ಒಬ್ಬ ಅಪರಿಚಿತ ವ್ಯಕ್ತಿಯ ಮೇಲೂ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ ಎಂದು ನೊಯ್ಡಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಸೆಕ್ಷನ್ ಗಳಾದ 124 ಎ (ದೇಶದ್ರೋಹ), 295 ಎ (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 504 (ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ), 506 (ಕ್ರಿಮಿನಲ್ ಬೆದರಿಕೆ), 34 ( ಆ್ಯಕ್ಟ್ ಡನ್ ಬೈ ಸೆವೆರಲ್ ಫರ್ದರೆನ್ಸ್ ಆಫ್ ಕಾಮನ್ ಇನ್ ಟೆನ್ಶನ್ ), 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.